ಮಹಾರಾಷ್ಟ್ರ ಮಹಿಳಾ ಕಾನ್ಸ್‌ಟೇಬಲ್‌ಗಳ ಕೆಲಸದ ಸಮಯವನ್ನು 12 ಗಂಟೆಯಿಂದ ಎಂಟು ಗಂಟೆಗೆ ಇಳಿಕೆ

ಮುಂಬೈ: ಮಹಾರಾಷ್ಟ್ರ ಸರ್ಕಾರ ಮಹಿಳಾ ಕಾನ್ಸ್‌ಟೇಬಲ್‌ಗಳ ಕೆಲಸದ ಸಮಯವನ್ನು 12 ಗಂಟೆಯಿಂದ ಎಂಟು ಗಂಟೆಗೆ ಇಳಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ವೈಯಕ್ತಿಕ ಬದುಕಿನ ಜವಾಬ್ದಾರಿಯನ್ನು ನಿಭಾಯಿಸಲು ಮಹಿಳಾ ಪೊಲೀಸರಿಗೆ ಅನಕೂಲವಾಗುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಸಂಜಯ್ ಪಾಂಡೆ ಈ ಕ್ರಮದ ಅನುಷ್ಠಾನವನ್ನು ಖಚಿತಪಡಿಸಿದ್ದಾರೆ. ಇದನ್ನು ಮೊದಲು ನಾಗ್ಪುರ ನಗರ, ಅಮರಾವತಿ ನಗರ ಮತ್ತು ಪುಣೆ ಗ್ರಾಮಾಂತರದಲ್ಲಿ ಜಾರಿಗೊಳಿಸಲಾಗುವುದು. ಕಳೆದ ತಿಂಗಳು ಮೂರು ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ ಈ ಕ್ರಮವನ್ನು ಜಾರಿಗೊಳಿಸಲಾಗಿದೆ ಮತ್ತು ಕೆಲವು ದಿನಗಳಲ್ಲಿ ರಾಜ್ಯದ ಇತರ ನಗರ ಮತ್ತು ಜಿಲ್ಲೆಗಳಲ್ಲೂ ಮಹಿಳಾ ಕಾನ್ಸ್‌ಟೇಬಲ್‌ಗಳ ಕರ್ತವ್ಯದ ಸಮಯ ಕಡಿತಗೊಳಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಮಹಿಳಾ ಕಾನ್ಸ್‌ಟೇಬಲ್‌ಗಳ ಬದ್ಧತೆಗಳನ್ನು ಪರಿಗಣಿಸಿ ಅವರು ವೃತ್ತಿಪರ ಕರ್ತವ್ಯಗಳಲ್ಲದೆ ಮನೆಯನ್ನೂ ನಿಬಾಯಿಸುವ ಅಗತ್ಯ ಇದೆ. ಹೀಗಾಗಿ ಒಂದು ತಿಂಗಳ ಹಿಂದೆ ಅವರ ಕೆಲಸದ ಅವಧಿ ಕಡಿತಗೊಳಿಸಲಾಗಿದ್ದು, ಅದು ಉತ್ತಮ ಫಲಿತಾಂಶ ನೀಡಿದೆ ಎಂದು ಅವರು ಹೇಳಿದ್ದಾರೆ.

Raksha Deshpande

Recent Posts

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

10 mins ago

ʼರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕುʼ

ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

12 mins ago

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

32 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

43 mins ago

ಜಮ್ಮು –ಕಾಶ್ಮೀರ : ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…

53 mins ago

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

1 hour ago