ಮಹಿಳಾ ಕ್ರಿಕೆಟ್‍ನಲ್ಲಿ ಮಿಥಾಲಿ ರಾಜ್ ನೂತನ ವಿಶ್ವದಾಖಲೆ

ಲಂಡನ್: ಭಾರತ ಮಹಿಳಾ ಏಕದಿನ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಅಂತರಾಷ್ಟ್ರೀಯ ಮಹಿಳಾ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ರನ್ ದಾಖಲಿಸಿದ ಆಟಗಾರ್ತಿಯಾಗಿ ನೂತನ ವಿಶ್ವದಾಖಲೆ ನಿರ್ಮಿಸಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ಮಿಥಾಲಿ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಇಂಗ್ಲೆಂಡ್‍ನ ಮಾಜಿ ಆಟಗಾರ್ತಿ ಚಾರ್ಲೋಟ್ ಎಡ್ವರ್ಡ್ಸ್ ದಾಖಲೆಯನ್ನು ಮುರಿದಿದ್ದಾರೆ. ಎಡ್ವರ್ಡ್ಸ್ ಎಲ್ಲಾ ಮಾದರಿಯ ಕ್ರಿಕೆಟ್‍ನಲ್ಲಿ ಒಟ್ಟು 10,273 ರನ್ ಗಳಿಸಿದ್ದರು. ಇದೀಗ ಮಿಥಾಲಿ ಒಟ್ಟು 10,377 ರನ್ ಬಾರಿಸುವ ಮೂಲಕ ವಿಶ್ವ ಮಹಿಳಾ ಕ್ರಿಕೆಟ್‍ನ ಕ್ವೀನ್ ಆಗಿ ಗುರುತಿಸಿಕೊಂಡಿದ್ದಾರೆ.
ಈ ಹಿಂದೆ ಏಕದಿನ ಕ್ರಿಕೆಟ್‍ನಲ್ಲಿ 7,000ರನ್ ಗಳಿಸಿದ ಮೊದಲ ಮಹಿಳಾ ಆಟಗಾರ್ತಿಯೆಂದು ಗುರುತಿಸಿಕೊಂಡಿದ್ದ ಮಿಥಾಲಿ, ಇದೀಗ ಎಲ್ಲಾ ಮಾದರಿಯ ಕ್ರಿಕೆಟ್‍ನಿಂದ ಒಟ್ಟು 10,000 ರನ್ ಗಡಿದಾಟಿದ್ದಾರೆ. ಈ ಮೂಲಕ 10,000 ರನ್ ಗಡಿದಾಟಿದ ಮಹಿಳಾ ಕ್ರಿಕಟ್‍ನ ಎರಡನೇ ಆಟಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಈ ಮೊದಲು ಚಾರ್ಲೋಟ್ ಎಡ್ವರ್ಡ್ಸ್ 10,000 ರನ್ ಸಿಡಿಸಿದ್ದರು. ಇದೀಗ ಮಿಥಾಲಿ ಕೂಡ ಈ ಸಾಧನೆ ಮಾಡಿದ್ದಾರೆ. ಮಿಥಾಲಿ ಒಟ್ಟು 317 ಪಂದ್ಯಗಳಿಂದ 10,377 ರನ್ ಸಿಡಿಸಿದ್ದರೆ. ಚಾರ್ಲೋಟ್ ಎಡ್ವರ್ಡ್ಸ್ 309 ಪಂದ್ಯಗಳಿಂದ 10,273 ರನ್ ಕಲೆಹಾಕಿದ್ದಾರೆ. ಎಡ್ವರ್ಡ್ ಈಗಾಗಲೇ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ನೀಡಿದ್ದಾರೆ. ಮಿಥಾಲಿ ಇನ್ನೂ ಕೂಡ ಭಾರತ ತಂಡದ ಪರ ಆಡುತ್ತಿದ್ದಾರೆ.

Indresh KC

Recent Posts

ಎಸ್​ಎಸ್​ಎಲ್​ಸಿ ಫಲಿತಾಂಶ: ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಮುಂದುವರೆದಿವೆ. 

12 mins ago

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

40 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

45 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

58 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

1 hour ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

1 hour ago