ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್ ವೈದ್ಯರು ಹೇಳಿದ್ದಾರೆ. ಮನಮೋಹನ ಸಿಂಗ್ ಅವರಿಗೆ ಜ್ವರ ಕಾಣಿಸಿದ್ದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದೀಗ ಅವರ ಆರೋಗ್ಯ ಸ್ಥಿರವಾಗಿದೆ. ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ್ದಾರೆ. ಶೀಘ್ರ ಗುಣಮುಖರಾಗಿ ಮತ್ತು ಉತ್ತಮ ಆರೋಗ್ಯ ನಿಮ್ಮದಾಗಲಿ ಮನಮೋಹನ್ ಜಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.