ದೇಶ

ಮಾಜಿ ರಾಜ್ಯಸಭಾ ಸಂಸದ ಹಾಗೂ ಹಿರಿಯ ಪತ್ರಕರ್ತ ಚಂದನ್ ಮಿತ್ರಾ ನಿಧನ

ದೆಹಲಿ : ಮಾಜಿ ರಾಜ್ಯಸಭಾ ಸಂಸದ ಹಾಗೂ ಹಿರಿಯ ಪತ್ರಕರ್ತ ಚಂದನ್ ಮಿತ್ರಾ ಅವರು ಗುರುವಾರ ನಿಧನರಾಗಿದ್ದಾರೆ.
ಈ ಕುರಿತಂತೆ ಚಂದನ್ ಮಿತ್ರಾ ಅವರ ಪುತ್ರ ಕುಶನ್ ಮಿತ್ರಾ ಟ್ವೀಟ್ ಮಾಡಿದ್ದು, ಹಲವು ದಿನಗಳಿಂದ ನನ್ನ ತಂದೆ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ರಾತ್ರಿ ನಮ್ಮನ್ನೆಲ್ಲ ಅವರು ಅಗಲಿದರು ಎಂದು ಕುಶನ್ ಹೇಳಿದ್ದಾರೆ.

ಚಂದನ್ ಮಿತ್ರಾ ದೆಹಲಿಯ ‘ದಿ ಪಯೋನೀರ್’ ಪತ್ರಿಕೆಯ ಸಂಪಾದಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಎರಡು ಬಾರಿ ರಾಜ್ಯಸಭೆಯ ಸಂಸದರಾಗಿ ಸೇವೆ ಸಲ್ಲಿಸಿದ್ದರು. ಚಂದನ್ ಮಿತ್ರಾ ಅವರ ಸಾವಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

ಚಂದನ್ ಮಿತ್ರಾ ಅವರು ತಮ್ಮ ಬುದ್ಧಿಶಕ್ತಿ ಹಾಗೂ ಒಳನೋಟಗಳಿಂದ ನೆನಪಿನಲ್ಲಿ ಉಳಿಯುತ್ತಾರೆ. ಅವರು ಮಾಧ್ಯಮ ಮತ್ತು ರಾಜಕೀಯ ಜಗತ್ತಿನಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ

Sneha Gowda

Recent Posts

ಆರ್​​ಸಿಬಿ ತಂಡದ ಸತತ 5 ಪಂದ್ಯಗಳ ಗೆಲುವಿಗೆ ಕಾರಣ ಯಾರು ಗೊತ್ತಾ?

ಬಹುನಿರೀಕ್ಷಿತ 2024ರ ಇಂಡಿಯನ್​ ಪ್ರೀಮಿಯರ್​ ಲೀಗ್​​ 17ನೇ ಸೀಸನ್​​ ಮುಕ್ತಾಯ ಹಂತಕ್ಕೆ ಬಂದಿದೆ. ಸತತ 6 ಪಂದ್ಯ ಗೆದ್ದು ಪ್ಲೇ…

2 mins ago

ಸಚಿನ್ ತೆಂಡೂಲ್ಕರ್ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕ್ರಿಕೆಟ್ ದಿಗ್ಗಜ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಸಚಿನ್ ತೆಂಡೂಲ್ಕರ್ ಅವರ ವೈಯಕ್ತಿಕ ಭದ್ರತಾ ಸಿಬ್ಬಂದಿ(ಗನ್​ಮ್ಯಾನ್​) ಸರ್ವೀಸ್ ಗನ್…

13 mins ago

ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಕೃಷಿ ಉಪಕರಣಗಳು, ಬಿತ್ತನೆ ಬೀಜ ವಿತರಣೆ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿಭಾಗ್ಯ ಯೋಜನೆಯ ಅಡಿಯಲ್ಲಿ ರೈತರಿಗೆ ಕೃಷಿ…

17 mins ago

ಬೆಂಬಲಿಗರ ಸಭೆ ನಡೆಸಿದ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್

ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿಯಲ್ಲಿ ಬಂಡಾಯವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಶಾಸಕ ರಘುಪತಿ ಭಟ್ ಇಂದು ತಮ್ಮ ನಿವಾಸದಲ್ಲಿ…

31 mins ago

14 ಜನರಿಗೆ ಭಾರತದ ಪೌರತ್ವ ನೀಡಿದ ಕೇಂದ್ರ ಸರ್ಕಾರ

ಭಾರತದ ಪೌರತ್ವ ನೀಡುವ ಪೌರತ್ವ (ತಿದ್ದುಪಡಿ) ಕಾಯ್ದೆ, 2019  ಕಾಯ್ದೆ ಜಾರಿಯಾದ ಬೆನ್ನಲ್ಲೇ ಕೇಂದ್ರ ಸರ್ಕಾರವು 14 ಜನರಿಗೆ ಭಾರತದ…

39 mins ago

ಕತ್ತು ಸೀಳಿ ಯುವಕನ ಕೊಲೆ ಪ್ರಕರಣ: ಆರೋಪಿ ಪೊಲೀಸರ ಗುಂಡೇಟಿಗೆ ಬಲಿ

ಕತ್ತು ಸೀಳಿ ಯುವಕನನ್ನು ಕೊಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಎನ್​ಕೌಂಟರ್​ ಮಾಡಿದ್ದಾರೆ.

52 mins ago