Categories: ದೇಶ

ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ ಕೇಂದ್ರ ಸಚಿವೆ ಸ್ಮೃತಿ ಇರಾನಿಯ ಚೊಚ್ಚಲ ಕಾದಂಬರಿ ‘ಲಾಲ್ ಸಲಾಮ್’!

ಕೇಂದ್ರ ಸಚಿವೆ ಸ್ಮೃತಿ ಇರಾನಿ ತಮ್ಮ ಚೊಚ್ಚಲ ಕಾದಂಬರಿ ‘ಲಾಲ್ ಸಲಾಮ್’ (Lal Salaam) ಮೂಲಕ ಲೇಖಕಿಯಾಗಿದ್ದಾರೆ.
ವೆಸ್ಟ್‌ಲ್ಯಾಂಡ್ ಪ್ರಕಾಶನ ಸಂಸ್ಥೆ ಈ ಕಾದಂಬರಿಯನ್ನು ಪ್ರಕಟಿಸಲಿದೆ.

2010ರ ಏಪ್ರಿಲ್​ ತಿಂಗಳಲ್ಲಿ ದಾಂತೇವಾಡದಲ್ಲಿ 76 ಸಿಆರ್‌ಪಿಎಫ್ ಸಿಬ್ಬಂದಿಗಳ ದುರಂತ ಹತ್ಯೆಯಿಂದ ಸ್ಫೂರ್ತಿ ಪಡೆದು ಈ ಕಾದಂಬರಿಯನ್ನು ರಚಿಸಲಾಗಿದೆ.

ದೇಶಕ್ಕೆ ಜೀವಮಾನದ ಸೇವೆಯನ್ನು ನೀಡಿದ ಅಸಾಧಾರಣ ಪುರುಷರು ಮತ್ತು ಮಹಿಳೆಯರಿಗೆ ಗೌರವ ಸಲ್ಲಿಸಲು ಈ ಕಾದಂಬರಿ ಬರೆಯಲಾಗಿದೆ. ನವೆಂಬರ್ 29ರಂದು ಈ ಕಾದಂಬರಿ ಮಾರುಕಟ್ಟೆಗೆ ಬರಲಿದೆ.

ಕೆಲವು ವರ್ಷಗಳಿಂದ ಈ ಕಥೆಯು ನನ್ನ ಮನಸ್ಸಿನಲ್ಲೇ ಹುದುಗಿತ್ತು. ಓದುಗರು ನನ್ನ ಕಾದಂಬರಿಯ ನಿರೂಪಣೆಯನ್ನು ಆನಂದಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಸ್ಮೃತಿ ಇರಾನಿ ತಮ್ಮ ಪುಸ್ತಕದಲ್ಲಿ ಹೇಳಿದ್ದಾರೆ.

ಲಾಲ್ ಸಲಾಮ್ ಓರ್ವ ಯುವ ಅಧಿಕಾರಿ ವಿಕ್ರಮ್ ಪ್ರತಾಪ್ ಸಿಂಗ್​ನ ಕಥೆಯಾಗಿದೆ. ವಿಕ್ರಮ್ ಸಿಂಗ್ ರಾಜಕಾರಣ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿರುವ ವ್ಯವಸ್ಥೆಯಲ್ಲಿ ಸಿಲುಕಿ ಯಾವ ರೀತಿ ಸವಾಲುಗಳನ್ನು ಎದುರಿಸುತ್ತಾನೆ ಎಂಬುದು ಆಗಿದೆ.

ವೇಗದ ಗತಿಯ ಥ್ರಿಲ್ಲರ್‌ನ ಎಲ್ಲಾ ಅಂಶಗಳನ್ನು ಹೊಂದಿರುವ ಕಾದಂಬರಿ, ವೇಗ, ಆಕ್ಷನ್, ಸಸ್ಪೆನ್ಸ್, ಸ್ಮರಣೀಯ ಪಾತ್ರಗಳು ಮತ್ತು ಸನ್ನಿವೇಶಗಳು ‘ಲಾಲ್ ಸಲಾಮ್’ ಕಾದಂಬರಿಯ ಪ್ರಮುಖ ಅಂಶಗಳಾಗಿದ್ದು, ಪ್ರಾರಂಭದಿಂದ ಕೊನೆಯವರೆಗೆ ಓದುಗರನ್ನು ಹಿಡಿದಿಟ್ಟುಕೊಳ್ಳುತ್ತದೆ ಎಂದು ವೆಸ್ಟ್ ಲ್ಯಾಂಡ್ ಪ್ರಕಾಶಕರಾದ ವಿ.ಕೆ. ಕಾರ್ತಿಕಾ ಹೇಳಿದ್ದಾರೆ.

 

Sneha Gowda

Recent Posts

ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ : ಮೇ 17ಕ್ಕೆ ಮುಂದೂಡಿಕೆ

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ

5 mins ago

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…

17 mins ago

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

44 mins ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

57 mins ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

1 hour ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

1 hour ago