News Karnataka Kannada
Tuesday, April 30 2024
ದೇಶ

ಮುಂಬೈ : 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ

Mass Rape 15 7 21
Photo Credit :

ಮುಂಬೈ : ದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಮುಂಬೈನಲ್ಲಿ 30 ಮಂದಿ ನೀಚರು 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾರೆ.

ಕಳೆದ ಒಂಬತ್ತು ತಿಂಗಳಿನಿಂದ ವಿವಿಧ ಸ್ಥಳಗಳಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಇಬ್ಬರು ಅಪ್ರಾಪ್ತ ವಯಸ್ಕರು ಸೇರಿ 24 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಜನವರಿಯಲ್ಲಿ ಬಾಲಕಿ ಮೇಲೆ ಮೊದಲ ಬಾರಿಗೆ ಆಕೆಯ ಸ್ನೇಹಿತನೇ ಅತ್ಯಾಚಾರ ಎಸಗಿದ್ದಾನೆ. ನಂತರ ಅತ್ಯಾಚಾರದ ವಿಡಿಯೋ ಮಾಡಿದ ಪಾಪಿ ಬ್ಲಾಕ್‌ಮೇಲ್ ಮಾಡಿ ಪದೇ ಪದೆ ಅತ್ಯಾಚಾರ ಎಸಗಿದ್ದಾನೆ.

ಇಷ್ಟೇ ಅಲ್ಲದೆ ಈ ವಿಡಿಯೋವನ್ನು ತನ್ನ ಸ್ನೇಹಿತರಿಗೆ ಆತ ಕಳಿಸಿದ್ದು, ಅವರು ಕಾಮತೃಷೆಗೆ ಬಾಲಕಿಯನ್ನು ಬಳಸಿಕೊಂಡಿದ್ದಾರೆ.  ಮುಂಬೈನ ವಿವಿಧ ಸ್ಥಳಗಳಲ್ಲಿ ಕನಿಷ್ಠ ಆರು ಬಾರಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.

ಬುಧವಾರ ರಾತ್ರಿ ಇಂಥದ್ದೇ ಶೋಷಣೆಗೆ ಒಳಪಟ್ಟ ಬಾಲಕಿ ದೈಹಿಕ ಸ್ಥಿತಿ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಪೊಲೀಸರಿಗೆ ಬಾಲಕಿ ದೂರು ನೀಡಿದ್ದು, ಪೊಲೀಸರು 24 ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ. ಇವರೆಲ್ಲರೂ ಆಕೆಗೆ ಪರಿಚಯ ಇರುವವರೇ ಆಗಿದ್ದಾರೆ. ಇನ್ನುಳಿದ ಆರೋಪಿಗಳನ್ನು ಪೊಲೀಸರು ಹುಡುಕುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು