ಯೋಗಿ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕಾ ವಾದ್ರಾ

ಲಖಿಂಪುರ್: ಉತ್ತರ ಪ್ರದೇಶದಲ್ಲಿ ಹಿಂಸಾಚಾರ ನಡೆದ ಲಖಿಂಪುರ್ ಖೇರಿಗೆ ತೆರಳುತ್ತಿದ್ದಾಗ ಬಂಧನಕ್ಕೊಳಗಾಗಿರುವ ಪ್ರಿಯಾಂಕ ವಾದ್ರಾ ಯೋಗಿ  ಆದಿತ್ಯನಾಥ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

“ಲಖಿಂಪುರ್ ಖೇರಿ ಘಟನೆ ಒಂದೇ ಅಲ್ಲ, ಉತ್ತರ ಪ್ರದೇಶದಲ್ಲಿ ಯಾರೇ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರೂ ಅವರೆಡೆಗೆ ಹಿಂಸಾಚಾರ ಹಾಗೂ ತುಳಿತ ಸರ್ಕಾರದ ಉತ್ತರವಾಗಿರಲಿದೆ” ಎಂದು ಪ್ರಿಯಾಂಕ ವಾಧ್ರ ಹೇಳಿದ್ದಾರೆ.

ಲಖಿಂಪುರ್ ಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯದಲ್ಲಿ ಪ್ರಿಯಾಂಕ ವಾಧ್ರ ಅವರನ್ನು ಸೀತಾಪುರ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದರು. ಲಖಿಂಪುರದಲ್ಲಿ ನಡೆದ ಹಿಂಸಾಚಾರದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 4 ಮಂದಿ ರೈತರಾಗಿದ್ದು, ಡಿಸಿಎಂ ಕೇಶವ ಪ್ರಸಾದ್ ಮೌರ್ಯ ಅವರನ್ನು ಸ್ವಾಗತಿಸಲು ತೆರಳುತ್ತಿದ್ದಾಗ ಬಿಜೆಪಿ ಕಾರ್ಯಕರ್ತರ ವಾಹನಗಳಿಗೆ ಸಿಲುಕಿ ಸಾವನ್ನಪ್ಪಿದ್ದರು.ಇನ್ನಿತರ ಮಂದಿ ಬಿಜೆಪಿ ಕಾರ್ಯಕರ್ತರಾಗಿದ್ದು, ಅವರ ವಾಹನ ಚಾಲಕನನ್ನು ಹೊರಗೆಳೆದು ಪ್ರತಿಭಟನಾ ನಿರತರು ಥಳಿಸಿದ್ದರು.

ಈ ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರ ಅ.04 ರಂದು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರನ ವಿರುದ್ಧ ಪ್ರಕರಣ ದಾಖಲಿಸಿ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸುವುದಾಗಿ ಭರವಸೆ ನೀಡಿತ್ತು.

ಈ ಘಟನೆಗಳ ಬಗ್ಗೆ ಮಾತನಾಡಿರುವ ಪ್ರಿಯಾಂಕ ವಾಧ್ರ, “ಲಖಿಂಪುರ ಘಟನೆಯನ್ನು ತಾವು ರಾಜ್ಯ ಹಾಗೂ ದೇಶದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ದೊಡ್ಡ ಚಿತ್ರಣವಾಗಿ ನೋಡುತ್ತಿರುವುದಾಗಿ ಹೇಳಿದ್ದಾರೆ. ಲಖಿಂಪುರ ಒಂದೇ ಪ್ರಕರಣವಲ್ಲ. ಸರ್ಕಾರ ಪ್ರತಿಭಟನಾ ನಿರತರಿಗೆ ಪ್ರತಿಕ್ರಿಯೆಯಾಗಿ ಹಿಂಸಾಚಾರದ ಮೂಲಕ ಅವರ ಧ್ವನಿ ಅಡಗಿಸುವುದು, ತುಳಿಯುತ್ತಿದೆ” ಎಂದು ಹೇಳಿದ್ದಾರೆ.

“ನಿರಂತರ ತುಳಿತಕ್ಕೆ ಒಳಗಾಗಿದ್ದರಿಂದ ಈ ತೀವ್ರತರವಾದ ಪರಿಸ್ಥಿತಿ ಉಂಟಾಗಿದೆ, ಆದ್ದರಿಂದ ಉತ್ತರ ಪ್ರದೇಶದಲ್ಲಿ ಯಾರೇ ಪ್ರತಿಭಟನೆ ನಡೆಸಲಿ, ವಿದ್ಯಾರ್ಥಿಗಳಿರಲಿ ಅಥವಾ ಶಿಕ್ಷಕರಿರಲಿ ಅವರನ್ನು ಥಳಿಸಲಾಗುತ್ತದೆ ಹಾಗೂ ಜೈಲಿಗೆ ಕಳಿಸಲಾಗುತ್ತದೆ” ಎಂದು ಪ್ರಿಯಾಂಕ ವಾಧ್ರ ಆರೋಪಿಸಿದ್ದಾರೆ.

ಪ್ರತಿಭಟನೆ ಮೂಲಕ, ತಮ್ಮ ಹಕ್ಕುಗಳ ಬೇಡಿಕೆಗಾಗಿ ಧ್ವನಿ ಎತ್ತುವ ಜನರಿಗೆ ಹಿಂಸಾತ್ಮಕ ಪ್ರತಿಕ್ರಿಯೆ ನೀಡಲಾಗುತ್ತದೆ ಎಂದು ಪ್ರಿಯಾಂಕ ವಾಧ್ರ ಯೋಗಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Raksha Deshpande

Recent Posts

ಎಕ್ಸಾಂನಲ್ಲಿ ಫೇಲ್‌ : ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದೇನೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. . ಫೇಲ್ ಆದ ವಿಚಾರ ಪೋಷಕರಿಗೆ…

13 mins ago

29ನೇ ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಕಮಿ ರೀಟಾ ಶೆರ್ಪಾ

ಎವರೆಸ್ಟ್ ಮ್ಯಾನ್ ಎಂದೇ ಹೆಸರಾಗಿರುವ ನೇಪಾಳದ ಕಮಿ ರೀಟಾ ಶೆರ್ಪಾ 29ನೇ ಬಾರಿ ವಿಶ್ವದ ಅತಿ ಎತ್ತರದ ಪರ್ವತ ಮೌಂಟ್‌…

23 mins ago

ಭೀಕರ ಅಪಘಾತ : ಇಬ್ಬರು ಶಿಕ್ಷಕರು ಸ್ಥಳದಲ್ಲೇ ದುರ್ಮರಣ

ಮದುವೆಗೆ ಹೋಗಿ ತಡರಾತ್ರಿ ಮರಳಿ ಬರುತ್ತಿದ್ದ ಸಂದರ್ಭ ಕಾರು ಪಲ್ಟಿಯಾಗಿ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಾವಗಡ -ತುಮಕೂರು…

35 mins ago

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

59 mins ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

60 mins ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

1 hour ago