Categories: ದೇಶ

ರಸ್ತೆ ಅಪಘಾತ: 2020ರಲ್ಲಿ 1.20 ಲಕ್ಷ ಮಂದಿ ಸಾವು

ನವದೆಹಲಿ: 2020ರಲ್ಲಿ ಕೋವಿಡ್‌ ಲಾಕ್‌ಡೌನ್‌ ಹೊರತಾಗಿಯೂ ಭಾರತದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಿಂದ 1.20 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) 2020ರ ತನ್ನ ವಾರ್ಷಿಕ ‘ಕ್ರೈಮ್ ಇಂಡಿಯಾ’ ವರದಿ ಬಿಡುಗಡೆ ಮಾಡಿದೆ.

ಇದರಂತೆ ಪ್ರತಿ ದಿನ ಸರಾಸರಿ 328 ಜನರು ಜೀವ ಕಳೆದುಕೊಂಡಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ನಿರ್ಲಕ್ಷ್ಯದಿಂದಾಗಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 3.92 ಲಕ್ಷ ಜನರು ಸಾವಿಗೀಡಾಗಿದ್ದಾರೆ. ಅಂಕಿ–ಅಂಶಗಳ ಪ್ರಕಾರ, 2020ರಲ್ಲಿ 1.20 ಲಕ್ಷ ಸಾವುಗಳು ದಾಖಲಾಗಿವೆ. 2019ರಲ್ಲಿ 1.36 ಲಕ್ಷ ಮತ್ತು 2018ರಲ್ಲಿ 1.35 ಲಕ್ಷ ಸಾವುಗಳು ಸಂಭವಿಸಿವೆ.

ದೇಶದಲ್ಲಿ 2018ರಿಂದ ಈವರೆಗೆ 1.35 ಲಕ್ಷ ‘ಹಿಟ್ ಅಂಡ್ ರನ್’ ಪ್ರಕರಣಗಳನ್ನು ದಾಖಲಿಸಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎನ್‌ಸಿಆರ್‌ಬಿ ವರದಿಯಲ್ಲಿ ಉಲ್ಲೇಖಿಸಿದೆ.

‘ಹಿಟ್ ಅಂಡ್ ರನ್‌’ಗೆ ಸಂಬಂಧಿಸಿ 2020ರಲ್ಲಿ 41,196 ಪ್ರಕರಣಗಳು ದಾಖಲಾಗಿದ್ದರೆ, 2019ರಲ್ಲಿ 47,504 ಮತ್ತು 2018ರಲ್ಲಿ 47,028 ಪ್ರಕರಣಗಳು ವರದಿಯಾಗಿವೆ. ದೇಶದಾದ್ಯಂತ ಕಳೆದ ವರ್ಷ ಸರಾಸರಿ 112 ‘ಹಿಟ್ ಅಂಡ್ ರನ್‌’ ಪ್ರಕರಣಗಳು ವರದಿಯಾಗಿವೆ.

Sampriya YK

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

48 mins ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

1 hour ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

1 hour ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago