ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 100 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣ : ಕೇಂದ್ರ ಸರ್ಕಾರ

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 100 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಹೇಳಿದೆ.

ಈವರೆಗೆ ಕೇಂದ್ರವು ರಾಜ್ಯಗಳಿಗೆ 100 (100,35,96,665) ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 10,53,11,155 ಲಸಿಕೆಗಳಿವೆ ಎಂದು ಹೇಳಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 97,14,38,553 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Sneha Gowda

Recent Posts

ಮಾಜಿ ಮುಖ್ಯಮಂತ್ರಿ ಎಸ್.ಎಮ್ ಕೃಷ್ಣ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕೀಯ ಮುತ್ಸದಿ ಎಸ್​ಎಂ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆಗಾಗಿ…

21 mins ago

ಅರಿಯಡ್ಕ ಗ್ರಾಮದ ಕೆರೆಮೂಲೆ ನಿವಾಸಿ ನಾಪತ್ತೆ

ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾದ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

23 mins ago

ಸಿದ್ದಾರೂಢ ಕಾಲೋನಿಯಲ್ಲಿ ವಿನೋದ್‌ ಅಸೂಟಿ ಮತಯಾಚನೆ

ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರು,ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಧಾರವಾಡ ನಗರದ ವಾರ್ಡ್ ೫ (ಸಿದ್ದಾರೂಢ…

36 mins ago

ಮರು ಬಿಡುಗಡೆಯಾಗುತ್ತಿದೆ ಪುನೀತ್ ರಾಜಕುಮಾರ್ ಅಭಿನಯದ ‘ಅಂಜನಿಪುತ್ರ’

ಪುನೀತ್ ರಾಜಕುಮಾರ್  ಅವರು ನಾಯಕರಾಗಿ ನಟಿಸಿದ್ದ ಸೂಪರ್ ಹಿಟ್ ಚಿತ್ರ ‘ ಅಂಜನಿಪುತ್ರ’  ಮೇ 10 ರಂದು ಮರು ಬಿಡುಗಡೆಯಾಗುತ್ತಿದೆ.

43 mins ago

ನಟಿ ಶಿಲ್ಪಾಶೆಟ್ಟಿ ಹುಟ್ಟೂರು ಮಂಗಳೂರಿಗೆ ಭೇಟಿ : ಶಿಬರೂರು ಜಾತ್ರಾ ಮಹೋತ್ಸವದಲ್ಲಿ ಭಾಗಿ

ಬಾಲಿವುಡ್‌ ಕ್ವೀನ್‌ ನಟಿ ಶಿಲ್ಪಾಶೆಟ್ಟಿ ಯವರು ತನ್ನ ಹುಟ್ಟೂರು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಲವು ಕ್ಷೇತ್ರಗಳಿಗೆ ಭೇಟಿ…

48 mins ago

ಇಂದಿರಾ ಎಜುಕೇಶನ್ ಟ್ರಸ್ಟ್ ನ ಪದವಿ ಪ್ರದಾನ ಮತ್ತು ಡಿಪ್ಲೊಮಾ ಪದವಿ ಪ್ರದಾನ ಸಮಾರಂಭ

ಇಂದಿರಾ ಎಜುಕೇಶನ್ ಟ್ರಸ್ಟ್ ತನ್ನ ಪದವಿ ಪಡೆದ ವಿದ್ಯಾರ್ಥಿಗಳ ಪದವಿ ಪ್ರದಾನ ಮತ್ತು ಡಿಪ್ಲೋಮಾ ಪದವಿ ಪ್ರದಾನ ಸಮಾರಂಭವನ್ನು ಏಪ್ರಿಲ್…

51 mins ago