ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಶುಕ್ರವಾರ 1,301 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 29,44,764ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 17 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,248ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 386 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,36,615ಕ್ಕೆ ಏರಿಕೆಯಾಗಿದೆ. ಇನ್ನು 2 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 1,614 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,88,520ಕ್ಕೆ ಏರಿಕೆಯಾಗಿದೆ. ಇನ್ನು 18,970 ಸಕ್ರೀಯ ಪ್ರಕರಣಗಳಿವೆ.