ದೇಶ

ರಾಜ್ಯ- ಕೇಂದ್ರಾಡಳಿತ ಪ್ರದೇಶಗಳಿಗೆ 140 ಕೋಟಿಗೂ ಹೆಚ್ಚು ಕೋವಿಡ್-19 ಲಸಿಕೆಗಳ ಪೂರೈಕೆ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೂ 140 ಕೋಟಿಗೂ ಹೆಚ್ಚು ಕೋವಿಡ್-19 ಲಸಿಕೆಯ ಡೋಸ್‌ಗಳನ್ನು ಪೂರೈಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಭಾರತ ಸರ್ಕಾರ ಇದುವರೆಗೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 140 ಕೋಟಿಗೂ ಹೆಚ್ಚು (1,40,04,00,230) ಲಸಿಕೆಯ ಡೋಸ್‌ಗಳನ್ನು ಒದಗಿಸಿದೆ. 18.80 ಕೋಟಿಗೂ ಹೆಚ್ಚು (18,80,33,706) ಡೋಸ್‌ಗಳು ಇನ್ನೂ ಬಳಕೆಯಾಗದೇ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಕೇಂದ್ರ ಸರ್ಕಾರವು ಲಸಿಕಾಭಿಯಾನದ ವೇಗವನ್ನು ಹೆಚ್ಚಿಸಲು ಬದ್ಧವಾಗಿದೆ ಎಂದು ತಿಳಿಸಿದೆ. 2021ರ ಜನವರಿ 16ರಿಂದ ರಾಷ್ಟ್ರವ್ಯಾಪಿ ಲಸಿಕಾಭಿಯಾನ ಪ್ರಾರಂಭವಾಯಿತು. 2021ರ ಜೂನ್​ 21ರಂದು ವ್ಯಾಕ್ಸಿನೇಷನ್‌ನ ಹೊಸ ಹಂತ ಪ್ರಾರಂಭವಾಗಿ, ಲಸಿಕಾಭಿಯಾನ ಚುರುಕುಗೊಂಡಿದೆ.

ದೇಶದಲ್ಲಿ ಒಟ್ಟು ಕೋವಿಡ್​​ ಸೋಂಕಿತರ ಸಂಖ್ಯೆ 3,46,74,744ಕ್ಕೇರಿದೆ. ಮೃತರ ಸಂಖ್ಯೆ 4,74,735ಕ್ಕೆ ತಲುಪಿದೆ. ವ್ಯಾಕ್ಸಿನೇಷನ್ ಅಭಿಯಾನದಡಿ ದೇಶವ್ಯಾಪಿ ಇದುವರೆಗೆ ಒಟ್ಟು 131.18 ಕೋಟಿಗೂ ಹೆಚ್ಚು ಡೋಸ್ ಲಸಿಕೆ ನೀಡಲಾಗಿದೆ.

Sneha Gowda

Recent Posts

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

8 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

24 mins ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

36 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

9 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

9 hours ago