ನವದೆಹಲಿ : ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಹತ್ತಿರ 2 ಕೋಟಿಗೂ ಹೆಚ್ಚು ಕರೋನಾ ಲಸಿಕೆಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಈವರೆಗೆ ಕೇಂದ್ರವು ರಾಜ್ಯಗಳಿಗೆ 56,81,32,750 ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 2,25,52,523 ಡೋಸ್ ಕೋವಿಡ್ ಲಸಿಕೆಗಳಿವೆ ಎಂದು ಹೇಳಿದೆ.
ಕೇಂದ್ರದ ಸರ್ಕಾರ ನೀಡಿದ ಮಾಹಿತಿಯ ಪ್ರಕಾರ, ತ್ಯಾಜ್ಯ ಸೇರಿದಂತೆ ಒಟ್ಟು 55,11,51,992 ಪ್ರಮಾಣದಷ್ಟು ಲಸಿಕೆಗಳು ಬಳಕೆಯಾಗಿದೆ. ಇನ್ನು ಕೆಲವೇ ದಿನಗಳಲ್ಲಿ 1,09,32,960 ಡೋಸ್ ಲಸಿಕೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ.