ರಾಷ್ಟ್ರಪತಿಯವರನ್ನು ಭೇಟಿಯಾದ ಕಾಂಗ್ರೆಸ್‌ ನಿಯೋಗ

ನವದೆಹಲಿ : ಹಿರಿಯ ಕಾಂಗ್ರೆಸ್‌ ನಾಯಕರನ್ನೊಳಗೊಂಡ  ನಿಯೋಗವು ಲಖಿಂಪುರ ಖೇರಿ ಘಟನೆ ಕುರಿತು ಸತ್ಯಾಂಶಗಳನ್ನುಳ್ಳ ಮನವಿ ಪತ್ರವನ್ನು ರಾಷ್ಟ್ರಪತಿಯವರಿಗೆ ಸಲ್ಲಿಸಿತು. ನಿಯೋಗದಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಹಿರಿಯ ಕಾಂಗ್ರೆಸ್‌ ನಾಯಕರಾದ ಎ.ಕೆ.ಆಂಟನಿ, ಗುಲಾಮ್ ನಬಿ ಅಜಾದ್, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ವಾದ್ರಾ ಇದ್ದರು.‌

ರಾಷ್ಟ್ರಪತಿಯವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ’ಅ.3 ರಂದು ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವರ ಪುತ್ರ ಆಶಿಷ್‌ ಆರೋಪಿಯಾಗಿದ್ದಾರೆ. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಯಲು ಸಚಿವ ಅಜಯ್‌ ಮಿಶ್ರಾ ರಾಜೀನಾಮೆ ನೀಡಬೇಕು ಎಂದು ರಾಷ್ಟ್ರಪತಿಯವರಿಗೆ ತಿಳಿಸಿದ್ದೇವೆ’ ಎಂದು ಹೇಳಿದರು.

’ಪ್ರಕರಣದ ತನಿಖೆ ನಿಷ್ಪಕ್ಷವಾಗಿ ನಡೆದು, ನ್ಯಾಯ ಸಿಗಬೇಕಾದರೆ, ಸುಪ್ರೀಂ ಕೋರ್ಟ್‌ನ ಇಬ್ಬರು ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು. ಕೊಲೆಯ ಆರೋಪಿಗಳಿಗೆ ಶಿಕ್ಷೆ ವಿಧಿಸಬೇಕು’ ಎಂದು ಅವರು ಆಗ್ರಹಿಸಿದರು.

’ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸುವವರೆಗೂ ಈ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಹಾಗೆಯೇ ನ್ಯಾಯವೂ ಸಿಗುವುದಿಲ್ಲ. ಇದು ಕೇವಲ ಕೊಲೆಯಾದ ರೈತರ ಕುಟುಂಬಗಳ ಧ್ವನಿ ಮಾತ್ರವಲ್ಲ, ಎಲ್ಲ ರೈತರ ಧ್ವನಿಯಾಗಿದೆ. ಈ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನವೂ ನಡೆಯುತ್ತಿದೆ’ ಎಂದು ಹೇಳಿದರು. ’ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದೊಂದಿಗೆ ಚರ್ಚಿಸುವುದಾಗಿ ನಮಗೆ ಭರವಸೆ ನೀಡಿದ್ದಾರೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದರು.

Raksha Deshpande

Recent Posts

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

13 mins ago

ಮೇ 11ರಿಂದ 13ರವರೆಗೆ ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ

ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…

16 mins ago

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

29 mins ago

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

32 mins ago

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಆಕ್ಟಿವ್ ಆದ ಶಾಸಕ ಪ್ರಭು ಚವಾಣ್

ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…

46 mins ago

ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌ ಕೇಸ್‌ : ಇಬ್ಬರ ಬಂಧನ

ಶಾಸಕ ಇಕ್ಬಾಲ್‌ ಹಸೇನ್‌ ಅವರು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್‌ ಮಾಡಿದ್ದ ಆರೋಪದಡಿ…

48 mins ago