News Karnataka Kannada
Sunday, April 28 2024
ದೇಶ

ರೈಲಿನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಖುಷಿ ಸುದ್ದಿ ನೀಡಿದ ರೈಲ್ವೆ ಇಲಾಖೆ

Railway Delhi 17 6 21 Dt 176216 1 Newsk 9508623154
Photo Credit :

ರೈಲು ಪ್ರಯಾಣ ಆರಾಮದಾಯಕ ಪ್ರಯಾಣಗಳಲ್ಲಿ ಒಂದು. ರೈಲ್ವೆ ಇಲಾಖೆ ಪ್ರಯಾಣಿಕರ ಅನುಕೂಲಕ್ಕಾಗಿ ಅನೇಕ ಸೇವೆಗಳನ್ನು ಶುರು ಮಾಡ್ತಿರುತ್ತದೆ. ಈಗ ಮಹಿಳಾ ಪ್ರಯಾಣಿಕರಿಗೆ ಖುಷಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಮಹಿಳೆಯರು ರೈಲಿನಲ್ಲಿ ಸೀಟಿನ ಬಗ್ಗೆ ಚಿಂತಿಸಬೇಕಾಗಿಲ್ಲ.

ಬಸ್ ಮತ್ತು ಮೆಟ್ರೋ ರೈಲುಗಳಲ್ಲಿ ಮಹಿಳೆಯರಿಗೆ ಪ್ರತ್ಯೇಕ ಸೀಟುಗಳ ವ್ಯವಸ್ಥೆ ಇರುವಂತೆ ಭಾರತೀಯ ರೈಲ್ವೇ ಕೂಡ ಮಹಿಳೆಯರಿಗೆ ಸೀಟುಗಳನ್ನು ಮೀಸಲಿಡಲಿದೆ.

ರೈಲುಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ವಿಶೇಷ ಬರ್ತ್‌ಗಳನ್ನು ನೀಡಲು ರೈಲ್ವೆ ಇಲಾಖೆ ಮುಂದಾಗಿದೆ. ದೂರದ ರೈಲುಗಳಲ್ಲಿ ಮಹಿಳೆಯರ ಆರಾಮದಾಯಕ ಪ್ರಯಾಣಕ್ಕಾಗಿ ಭಾರತೀಯ ರೈಲ್ವೇ, ರಿಸರ್ವ್ ಬರ್ತ್ ಸೇರಿದಂತೆ ಹಲವು ಸೌಲಭ್ಯಗಳನ್ನು ಆರಂಭಿಸಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಎಕ್ಸ್ ಪ್ರೆಸ್ ರೈಲುಗಳಲ್ಲಿ ಸ್ಲೀಪರ್ ಕ್ಲಾಸ್‌ನಲ್ಲಿ ಆರು ಬರ್ತ್‌ಗಳನ್ನು ಮಹಿಳೆಯರಿಗಾಗಿ ಕಾಯ್ದಿರಿಸಲಾಗುವುದು ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಗರೀಬ್ ರಥ, ರಾಜಧಾನಿ, ದುರಂತೋ ಸೇರಿದಂತೆ ಸಂಪೂರ್ಣ ಹವಾನಿಯಂತ್ರಿತ ಎಕ್ಸ್ ಪ್ರೆಸ್ ರೈಲುಗಳ ಮೂರನೇ ಎಸಿ ಕೋಚ್‌ನಲ್ಲಿ ಆರು ಬರ್ತ್‌ಗಳನ್ನು ಮಹಿಳಾ ಪ್ರಯಾಣಿಕರಿಗೆ ಕಾಯ್ದಿರಿಸಲಾಗಿದೆ. ರೈಲುಗಳಲ್ಲಿ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 3 / 5. Vote count: 2

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು