ವಿದೇಶ

ಲಖಿಂಪುರ : ಆರೋಪಿಗಳ ಬಂಧನವಾಗದಿದ್ದರೆ ಉಪವಾಸ ಸತ್ಯಾಗ್ರಹ ಮಾಡುವೆ : ಸಿಧು

ಚಂಡೀಗಢ : ಲಖಿಂಪುರ ಹಿಂಸಾಚಾರದ ಕುರಿತು ಮಾತನಾಡಿರುವ ಕಾಂಗ್ರೆಸ್ ಪಂಜಾಬ್ ನಾಯಕ ನವಜೋತ್ ಸಿಂಗ್ ಸಿಧು  ಉತ್ತರ ಪ್ರದೇಶದ ಸಿಎಂ ಯೋಗಿ  ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರಬಾನಿಸಿದ್ದಾರೆ. ನಾಳೆಯೊಳಗೆ ಆರೋಪಿಗಳನ್ನು ಬಂಧನ ಮಾಡದಿದ್ದರೆ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು. ನ್ಯಾಯಕ್ಕಾಗಿ ಪ್ರಾಣ ಹೋದ್ರು ಚಿಂತೆ ಇಲ್ಲ. ಕೊನೆಯ ಕ್ಷಣದವರೆಗೆ ಹೋರಾಟ ನಡೆಯಲಿದೆ. ನನ್ನ ತಂದೆ ಮತ್ತು ಅಜ್ಜ ರೈತರು. ಅನ್ನದಾತರಿಗಾಗಿ ನಮ್ಮ ಪ್ರಾಣ ಕೊಡಲು ನಾನು ಸಿದ್ಧ. ಈ ನಿರ್ಧಾರದಿಂದ ಒಂದು ಅಡಿಯೂ ಹಿಂದೆ ಸರಿಯಲ್ಲ ಎಂದು ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.

ರೈತರ ಮೇಲೆ ಹಿಂದಿನಿಂದ ದಾಳಿ ನಡೆಸಿ ಕೊಲ್ಲಲಾಗಿದೆ. ಎಫ್‍ಐಆರ್ ದಾಖಲಾದ್ರೂ ಕೇಂದ್ರ ಗೃಹ ರಾಜ್ಯ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ  ವಿಚಾರಣೆಗೆ ಹಾಜರಾಗಿಲ್ಲ ಏಕೆ? ಪೊಲೀಸರು ಆರೋಪಿಗಳನ್ನು ಬಂಧಿಸುತ್ತಿಲ್ಲ ಏಕೆ ಎಂದು ಸಿಧು ಪ್ರಶ್ನೆ ಮಾಡಿದ್ದಾರೆ. ಕೇಂದ್ರ ಸಚಿವ ಮತ್ತು ಅವರ ಪುತ್ರ ಸಂವಿಧಾನಕ್ಕಿಂತ ದೊಡ್ಡವರೇನು ಎಂದು ಕಿಡಿಕಾರಿದರು. ಸದ್ಯ ಸಿಧು ನೇತೃತ್ವದ ತಂಡ ಉತ್ತರ ಪ್ರದೇಶ ಗಡಿಯತ್ತ ಹೊರಟಿದೆ. ಸೋಮವಾರವೇ ಸಿಧು ಪಂಜಾಬ್ ನಿಂದ ಲಖಿಂಪುರ ಖೇರಿವರೆಗೆ ಪಾದಯಾತ್ರೆ ನಡೆಸುವ ಬಗ್ಗೆ ಮಾತುಗಳನ್ನಾಡಿದ್ದರು.

Raksha Deshpande

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

7 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

7 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago