Categories: ದೇಶ

ಲಸಿಕೆ ಬೇಡ ಎಂದ ನಟಿ ಪೂಜಾ ಬೇಡಿಗೆ ಕೊರೋನಾ ಪಾಸಿಟಿವ್

ದೇಶದಿಂದ ಕೊರೋನಾ ವಿರುದ್ಧ ಲಸಿಕಾ​ ಅಭಿಯಾನ ಭರದಿಂದ ಸಾಗುತ್ತಿದೆ. ಆದರೆ ಕೆಲವರು ವ್ಯಾಕ್ಸಿನ್​ ಬಗ್ಗೆ ಅಪಸ್ವರ ಎತ್ತುತ್ತಾ ಬಂದಿದ್ದಾರೆ. ಆ ಪೈಕಿ ನಟಿ ಪೂಜಾ ಬೇಡಿ ಕೂಡ ಒಬ್ಬರು.

ಮೊದಲಿನಿಂದಲೂ ಲಸಿಕೆ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿದ್ದ ಅವರಿಗೆ ಈಗ ಕೊರೋನಾ ಸೋಂಕು ತಗುಲಿದೆ. ಈ ಬಗ್ಗೆ ಅವರು ಸ್ವತಃ ಮಾಹಿತಿ ಹಂಚಿಕೊಂಡಿದ್ದಾರೆ. ಲಸಿಕೆ ಪಡೆಯುವ ಬಗ್ಗೆ ಈಗ ತಮ್ಮ ನಿಲುವು ಏನು ಎಂಬುದನ್ನೂ ಅವರು ಸ್ಪಷ್ಟಪಡಿಸಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಪೂಜಾ ಬೇಡಿ ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ‘ಲಸಿಕೆ ತೆಗೆದುಕೊಳ್ಳದಿರುವ ಬಗ್ಗೆ ನಾನು ಮೊದಲಿನಿಂದಲೂ ಮಾತನಾಡುತ್ತಾ ಬಂದಿದ್ದೇನೆ. ವ್ಯಾಕ್ಸಿನ್​ ಪಡೆಯಬಾರದು ಎಂಬುದು ನನ್ನ ನಿರ್ಧಾರ ಆಗಿತ್ತು.

ಸ್ವಂತ ರೋಗ ನಿರೋಧಕ ಶಕ್ತಿಯೇ ನಿಧಾನವಾಗಿ ಹೆಚ್ಚಲಿದೆ. ನಿಮ್ಮ ಆಯ್ಕೆ ಏನು ಎಂಬುದನ್ನು ನೀವೇ ನಿರ್ಧರಿಸಿ’ ಎಂದು ಪೂಜಾ ಬೇಡಿ ಹೇಳಿದ್ದಾರೆ. ಗೋವಾದಲ್ಲಿ ವಾಸವಾಗಿರುವ ಪೂಜಾ ಬೇಡಿ ಅವರು ಫಿಟ್ನೆಸ್​ ಕೋಚ್​ ಆಗಿ ಕೆಲಸ ಮಾಡುತ್ತಿದ್ದಾರೆ. ಕೊವಿಡ್​ ಲಕ್ಷಣಗಳು ಕಾಣಿಸಿಕೊಂಡಾಗ ಅವರು ಡಸ್ಟ್​ ಅಲರ್ಜಿ ಆಗಿರಬಹುದು ಅಂತ ತಿಳಿದುಕೊಂಡಿದ್ದರು.

ಆದರೆ ಪರಿಸ್ಥಿತಿ ನಿಧಾನಕ್ಕೆ ಹದಗೆಡಲು ಶುರುವಾಯಿತು. ಹಾಗಾಗಿ ಟೆಸ್ಟ್​ ಮಾಡಿಸಿಕೊಳ್ಳಲು ತೀರ್ಮಾನಿಸಿದರು. ಆಗ ಅವರಿಗೆ ​ ಪಾಸಿಟಿವ್​ ಆಗಿರುವುದು ತಿಳಿಯಿತು.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago