Categories: ದೇಶ

ಲಸಿಕೆ ಲಭ್ಯತೆಯನ್ನು ಹೆಚ್ಚಿಸಲು ಕೈಜೋಡಿಸಿದ ಪ್ರಮುಖ ಕಂಪನಿಗಳು

ಬೆಂಗಳೂರು: ದೇಶದ ಎರಡು ಪ್ರಮುಖ ಬಯೋಟೆಕ್ ಕಂಪನಿಗಳಾದ ಬೆಂಗಳೂರು ಮೂಲದ ಬಯೋಕಾನ್ ಬಯಾಲಜಿಕ್ಸ್ ಲಿಮಿಟೆಡ್ (ಬಿಬಿಎಲ್) ಮತ್ತು ಪುಣೆ ಮೂಲದ ಸೆರಮ್ ಇನ್ಸ್ಟಿಟ್ಯೂಟ್ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ (ಎಸ್ಐಎಲ್ಎಸ್) ಕೋವಿಡ್ -19, ಡೆಂಗ್ಯೂ, ಎಚ್ಐವಿ ಮತ್ತು ಇತರೆ ಸಾಂಕ್ರಾಮಿಕ ರೋಗಗಳಿಗೆ ಲಸಿಕೆ ಮತ್ತು ಆಂಟಿಬಾಡಿ ಥೆರಪಿಟಿಕ್ಸ್ ಲಭ್ಯತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ಕಾರ್ಯತಂತ್ರದ ಪಾಲುದಾರಿಕೆ ಮಾಡಿಕೊಂಡಿವೆ.

ಈ ಒಪ್ಪಂದದ ಭಾಗವಾಗಿ, ಬಿಬಿಎಲ್ 15 ವರ್ಷಗಳವರೆಗೆ ವಾರ್ಷಿಕ 100 ಮಿಲಿಯನ್ ಡೋಸ್ ಲಸಿಕೆಗಳನ್ನು ಪಡೆಯಲು ಬದ್ಧವಾಗಿದ್ದು, ಇದಕ್ಕಾಗಿ ಎಸ್ಐಎಲ್ಎಸ್ ಗೆ 4.9 ಶತಕೋಟಿ ಮೌಲ್ಯದ ಶೇ. 15 ರಷ್ಟು ಪಾಲು ನೀಡಿದೆ.

ಶುಕ್ರವಾರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಇದನ್ನು ಪ್ರಕಟಿಸಿದ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಮತ್ತು ಎಸ್‌ಐಐ ಮುಖ್ಯ ಕಾರ್ಯನಿರ್ವಾಹಕ ಅದಾರ್ ಪೂನಾವಾಲಾ, ಈ ಪಾಲುದಾರಿಕೆಯು ಎರಡು ಪ್ರಮುಖ ಕಂಪನಿಗಳ ಸಾಮರ್ಥ್ಯ ಮತ್ತು ಸಂಪನ್ಮೂಲಗಳ ಪೂರಕೆ, ಲಸಿಕೆಗಳು ಹಾಗೂ ಜೀವಶಾಸ್ತ್ರದ ಮೂಲಕ ಜಾಗತಿಕ ಆರೋಗ್ಯ ರಕ್ಷಣೆಯ ಮೇಲೆ ಮಹತ್ವದ ಪ್ರಭಾವ ಬೀರುವ ಗುರಿ ಹೊಂದಿದೆ ಎಂದು ಹೇಳಿದ್ದಾರೆ.

ಬಿಬಿಎಲ್ ಜಾಗತಿಕ ಮಾರುಕಟ್ಟೆಗಳಿಗೆ ಕೋವಿಡ್-19 ಲಸಿಕೆ ಸೇರಿದಂತೆ ಸೆರಮ್ ಸಂಸ್ಥೆಯ ಲಸಿಕೆ ಬಂಡವಾಳವನ್ನು ವಾಣಿಜ್ಯೀಕರಣಗೊಳಿಸುತ್ತದೆ. ಇದು ಬಿಬಿಎಲ್‌ಗೆ ಹೆಚ್ಚುವರಿ ಬೆಳವಣಿಗೆಯಾಗಿದೆ ಎಂದು ಕಿರಣ್ ಮಜುಂದಾರ್ ಶಾ ಹೇಳಿದ್ದಾರೆ.

Raksha Deshpande

Recent Posts

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

18 mins ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

9 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

10 hours ago