Categories: ದೇಶ

ಲಸಿಕೆ ವಿತರಣೆ ವೇಗ ; ಜುಲೈನಲ್ಲಿ 13.45 ಕೋಟಿ ಡೋಸ್‌ ವಿತರಣೆ ; ಸಚಿವ ಮಾಂಡವೀಯ

ನವದೆಹಲಿ: ದೇಶದಲ್ಲಿ ಕೊರೋನ ಲಸಿಕೆ ವಿತರಣೆಯು ತಿಂಗಳಿನಿಂದ ತಿಂಗಳಿಗೆ ವೇಗ ಪಡೆಯುತಿದ್ದು ಜುಲೈನಲ್ಲಿ ಒಟ್ಟು 13.45 ಕೋಟಿ ಡೋಸ್‌ಗಳನ್ನು ನೀಡಲಾಗಿದೆ. ದೈನಂದಿನ ಸರಾಸರಿ ಲಸಿಕೆ ವಿತರಣೆ 43.41 ಲಕ್ಷ ಡೋಸ್‌ಗಳಷ್ಟಿರುವುದು ಗಮನಾರ್ಹವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಹೇಳಿದ್ದಾರೆ.
‘ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತವು ದಿನೇ ದಿನೇ ಪ್ರಬಲವಾಗುತ್ತಿದೆ. ಪ್ರತಿ ತಿಂಗಳು ಲಸಿಕೆ ವಿತರಣೆ ಪ್ರಕ್ರಿಯೆ ವೇಗವಾಗಿ ಹೆಚ್ಚುತ್ತಿದೆ. ಜುಲೈ ತಿಂಗಳಲ್ಲಿ ಗಮನಾರ್ಹವಾಗಿ ದೈನಂದಿನ ಸರಾಸರಿ 43.41 ಲಕ್ಷ ಡೋಸ್ ಮತ್ತು ತಿಂಗಳಲ್ಲಿ ಒಟ್ಟು 13.45 ಕೋಟಿ ಡೋಸ್‌ಗಳನ್ನು ವಿತರಿಸಲಾಗಿದೆ’ ಎಂದು ಮಾಂಡವೀಯ ಟ್ವೀಟ್ ಮಾಡಿದ್ದಾರೆ.
ಭಾರತದಲ್ಲಿ ಈವರೆಗೆ, ಒಟ್ಟು 50,10,09,609 ಲಸಿಕೆ ಡೋಸ್‌ಗಳನ್ನು 58,08,344 ಸೆಷನ್‌ಗಳ ಮೂಲಕ ನಿರ್ವಹಿಸಲಾಗಿದೆ ಎಂದು ಶನಿವಾರ ಬೆಳಿಗ್ಗೆ 7 ಗಂಟೆಯವರೆಗಿನ ತಾತ್ಕಾಲಿಕ ವರದಿ ತಿಳಿಸಿದೆ.
ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ 49,55,138 ಡೋಸ್ ಲಸಿಕೆ ನೀಡಲಾಗಿದೆ. ಕೇಂದ್ರ ಸರ್ಕಾರವು ಲಸಿಕೆ ಅಭಿಯಾನದ ವೇಗವನ್ನು ಹೆಚ್ಚಿಸುವ ಮೂಲಕ ಎಲ್ಲ ನಾಗರಿಕರ ಆರೋಗ್ಯ ರಕ್ಷಣೆಗೆ ಒತ್ತು ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

Indresh KC

Recent Posts

ಮನೆಯ ಗೇಟ್ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…

4 mins ago

ಐತಿಹಾಸಿಕ ʻಹಲಗಲಿʼ ಕಥೆಗೆ ನಾಯಕನಾದ ನಟರಾಕ್ಷಸ ಧನಂಜಯ್

ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್‌ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್‌ ಸುಕೇಶ್‌…

5 mins ago

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ವೇಳೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕ!

ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಘಟನೆ…

10 mins ago

ಮುಂಬೈನ ಮೆಕ್​ಡೊನಾಲ್ಡ್ಸ್​ಗೆ ಬಾಂಬ್​ ಬೆದರಿಕೆ

ಇತ್ತೀಚೆಗೆ ದೇಶದಾದ್ಯಂತ ಬಾಂಬ್‌ ಬೆದರಿಕೆ ಕೇಳಿಬರುತ್ತವೆ ಇದರ ಹಿಂದೆ ಯಾರ ಕೈಚಳಕವಿದೆ ಎಂದು ಇನ್ನು ಬೆಳಕಿಗೆ ಬಂದಿಲ್ಲ. ಈಗಾಗಲೇ ಶಾಲೆಗಳಿಗ,…

21 mins ago

ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ.

33 mins ago

ಪತಂಜಲಿಯ ಸೋನ್​ಪಾಪ್ಡಿ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ : ಮೂವರ ಬಂಧನ

 ಪತಂಜಲಿಯ ನವರತ್ನ ಇಲೈಚಿ ಸೋನ್ ಪಾಪ್ಡಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ನಂತರ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಅಧಿಕಾರಿ ಮತ್ತು ಇತರ…

38 mins ago