Categories: ದೇಶ

ಲೋಕಸಭೆಯಲ್ಲಿ ಒಬಿಸಿ ಮೀಸಲು ಮಸೂದೆಗೆ ಅನುಮೋದನೆ ; ಬುಧವಾರ ರಾಜ್ಯಸಭೆಯ ಅನುಮೋದನೆ ಸಾದ್ಯತೆ

ನವದೆಹಲಿ, : ಲೋಕಸಭೆಯಲ್ಲಿ ಸೋಮವಾರ ಮಂಡಿಸಿದ್ದ ‘ಮೀಸಲಾತಿ ನೀಡಲು ಒಬಿಸಿ ಪಟ್ಟಿಯನ್ನು ಸಿದ್ದಪಡಿಸುವ ಹಕ್ಕನ್ನು ರಾಜ್ಯಗಳಿಗೆ ನೀಡುವ’ ಮಸೂದೆಯು ಮಂಗಳವಾರ ವ್ಯಾಪಕ ಚರ್ಚೆಯ ಬಳಿಕ ಅನುಮೋದನೆ ಗೊಂಡಿದೆ.ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಅವಶ್ಯಕತೆಗಳಿಗೆ ಅನುಗುಣವಾಗಿ ಒಬಿಸಿ ಪಟ್ಟಿಯನ್ನು ತಯಾರಿಸಲು ಸಾಧ್ಯವಾಗಲು ಅವಕಾಶ ಮಾಡಿಕೊಡುವ ಮಸೂದೆಯನ್ನು ಲೋಕಸಭೆಯಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವೀರೇಂದ್ರ ಕುಮಾರ್ 127ನೇ ಸಂವಿಧಾನಿಕ ತಿದ್ದುಪಡಿಗಾಗಿ ಮಂಡಿಸಿದ್ದರು. ಲೋಕಸಭೆಯಲ್ಲಿ ಇದು ಅಂಗೀಕಾರ ಆಗಿರುವುದರಿಂದ ಬುಧವಾರ ರಾಜ್ಯಸಭೆಯಲ್ಲಿ ಮಂಡನೆ ಆಗುವ ಸಾಧ್ಯತೆ ಇದೆ. ಅಲ್ಲದೆ ಬುಧವಾರ ಅಥವಾ ಗುರುವಾರವೇ ಅಂಗೀಕಾರ ಆಗುವ ಸಾಧ್ಯತೆಯೂ ಇದೆ.
ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಅನ್ವಯ ರಾಜ್ಯ ಸರ್ಕಾರಗಳಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಲು ಮತ್ತು ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರಿಗೆ ಪ್ರವೇಶ ನೀಡುವ ಹಕ್ಕು ಇರುವುದಿಲ್ಲ. ಸಂವಿಧಾನದ 102ನೇ ತಿದ್ದುಪಡಿಯಲ್ಲೂ ಇದರ ಉಲ್ಲೇಖವಿದೆ. ಇದೇ ಹಿನ್ನೆಲೆಯಲ್ಲಿ ಇತ್ತೀಚೆಗೆ ‘ಮಹಾರಾಷ್ಟ್ರ ಸರ್ಕಾರ ಮರಾಠರನ್ನು ಒಬಿಸಿಗೆ ಸೇರಿಸಿ ಅವರಿಗೆ ಮೀಸಲಾತಿ ನೀಡುವ ನಿರ್ಧಾರವನ್ನು’ ಸುಪ್ರೀಂ ಕೋರ್ಟ್ ತಡೆಹಿಡಿದಿತ್ತು.ಈಗ ಸಂವಿಧಾನದ 102ನೇ ತಿದ್ದುಪಡಿಯ ಕೆಲವು ನಿಬಂಧನೆಗಳನ್ನು ಸ್ಪಷ್ಟಪಡಿಸಲು ಈ ಮಸೂದೆ ತರಲಾಗಿದೆ. ಮಸೂದೆ ಅಂಗೀಕಾರವಾದ ನಂತರ ಹಿಂದುಳಿದ ಜಾತಿಗಳನ್ನು ಪಟ್ಟಿ ಮಾಡುವ ಹಕ್ಕನ್ನು ರಾಜ್ಯಗಳು ಪಡೆಯುತ್ತವೆ. ಮಸೂದೆ ಅಂಗೀಕಾರವಾದ ನಂತರ ಕೇಂದ್ರ/ರಾಜ್ಯ/ಕೇಂದ್ರಾಡಳಿತ ಪ್ರದೇಶಗಳು ಒಬಿಸಿಗಳ ಪ್ರತ್ಯೇಕ ಪಟ್ಟಿಗಳನ್ನು ಮಾಡುತ್ತವೆ.
ಈ ಮಸೂದೆ ಅಂಗೀಕಾರವಾದ ಬಳಿಕ ರಾಜ್ಯ ಸರ್ಕಾರಗಳು ಒಬಿಸಿ ಕೋಟಾದಲ್ಲಿ ವಿವಿಧ ಜಾತಿಗಳನ್ನು ಪರಿಗಣಿಸಲು ಸಾಧ್ಯವಾಗುತ್ತದೆ. ಇದರಿಂದ ಕರ್ನಾಟಕದಲ್ಲಿ ಪಂಚಮಸಾಲಿ ಲಿಂಗಾಯತರು, ಹರಿಯಾಣದಲ್ಲಿ ಜಾಟರು, ರಾಜಸ್ಥಾನದಲ್ಲಿ ಗುಜ್ಜರುಗಳು, ಮಹಾರಾಷ್ಟ್ರದಲ್ಲಿ ಮರಾಠರು, ಗುಜರಾತಿನಲ್ಲಿ ಪಟೇಲರ ಮೀಸಲಾತಿ ಹೋರಾಟದ ಹಾದಿ ಸುಗಮವಾಗಬಹುದು.

Indresh KC

Recent Posts

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

5 mins ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

29 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

47 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

1 hour ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

1 hour ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

2 hours ago