Categories: ದೇಶ

ವಾರದೊಳಗೆ ಸಂಪುಟ ವಿಸ್ತರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನವದೆಹಲಿ: ಮುಂದಿನ ವಾರದೊಳಗೆ ಸಚಿವ ಸಂಪುಟ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡಿದ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಜೊತೆಗಿನ ಸಭೆಯಲ್ಲಿ ಸಂಪುಟ ವಿಸ್ತರಣೆಯ ಅಗತ್ಯತೆಯನ್ನು ವಿವರಿಸಿರುವುದಾಗಿ ತಿಳಿಸಿದರು.

ಮೊದಲ ವಾರದೊಳಗೆ ಕೇಂದ್ರ ವರಿಷ್ಠರ ಅನುಮತಿ ಪಡೆಯುತೇವೆ. ಇಂದಿನ ಸಭೆಯಲ್ಲಿ ಸಂಭಾವ್ಯರ ಪಟ್ಟಿಯ ಬಗ್ಗೆ ಚರ್ಚೆ ನಡೆಸಿಲ್ಲ. ಆದರೆ, ಈ ವಿಚಾರದ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳುವ ಅಗತ್ಯವಿರುವುದಾಗಿ ತಿಳಿಸಿರುವುದಾಗಿ ಅವರು ಸುದ್ದಿಗಾರರಿಗೆ ಹೇಳಿದರು. ಸಂಪುಟ ವಿಸ್ತರಣೆ ಬಗ್ಗೆ ಮತ್ತೆ ದೆಹಲಿಗೆ ಭೇಟಿ ನೀಡುವ ಸಾಧ್ಯತೆಯಿದ್ದು, ಬಿಜೆಪಿ ಹೈಕಮಾಂಡ್ ನಿಂದ ಭೇಟಿ ಸಮಯವನ್ನು ಬಯಸಿರುವುದಾಗಿ ಅವರು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಭೆಯಲ್ಲಿ ರಾಜ್ಯದಲ್ಲಿನ ಕೋವಿಡ್-19 ಮತ್ತು ಪ್ರವಾಹ ಪರಿಸ್ಥಿತಿಯನ್ನು ವಿವರಿಸಿದ್ದೇನೆ. ರಾಜ್ಯದಲ್ಲಿ ಲಸಿಕೆ ಕೊರತೆ ಬಗ್ಗೆ ಚರ್ಚೆ ನಡೆಸಿದ್ದೇನೆ. ಪ್ರಧಾನಿ ಸಂಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ ಎಂದು ಹೇಳಿದರು.

Sampriya YK

Recent Posts

ಕೇರಳದ ಕೆಲವು ರಾಜ್ಯಗಳಿಗೆ ಮೇ 20 ರವರೆಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…

3 mins ago

ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ಪೊಲೀಸ್‌ ವಶಕ್ಕೆ

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…

7 mins ago

5 ದಿನ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ

ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…

20 mins ago

ರಾಹುಲ್, ಅಖಿಲೇಶ್ ಯಾದವ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಕಾಲ್ತುಳಿತ

 ಪಕ್ಷದ ಕಾರ್ಯಕರ್ತರ ಗದ್ದಲ, ಕಾಲ್ತುಳಿತದಂತಹ ಪರಿಸ್ಥಿತಿಯಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್…

20 mins ago

ಉತ್ತರ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು: ಭೋಜೇಗೌಡ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್‌ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…

29 mins ago

ನಗರ ಸಾರಿಗೆ ಬಸ್‌ ಮಾರ್ಗ ಬದಲಾಯಿಸಲು ಆಗ್ರಹ

ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್‌ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…

39 mins ago