ನವದೆಹಲಿ: ಛತ್ತೀಸ್ಗಢದಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆಗುವಾಗ ಪಕ್ಷಿಗೆ ಡಿಕ್ಕಿ ಹೊಡೆದ ಪರಿಣಾಮ ಮತ್ತೆ ಏರ್ಪೋರ್ಟ್ನಲ್ಲಿ ಲ್ಯಾಂಡ್ ಆಗಿದೆ.
ಛತ್ತೀಸ್ಗಢದ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ರಾಯ್ಪುರದಲ್ಲಿ ವಿಮಾನ ನಿಲ್ದಾಣಕ್ಕೆ ವಾಪಾಸ್ ಬಂದಿರುವ ಏರ್ ಇಂಡಿಯಾ ವಿಮಾನ ಕ್ಯಾನ್ಸಲ್ ಆಗಿದೆ.
ಕೇಂದ್ರ ಸಚಿವ ಸಂಪುಟದ ಸಭೆಗೆ ತೆರಳಲು ದೆಹಲಿಗೆ ಹೊರಟಿದ್ದ ಕೇಂದ್ರ ಸರ್ಕಾರದ ರಾಜ್ಯ ಸಚಿವರಾದ ರೇಣುಕ ಸಿಂಗ್ ಕೂಡ ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಅವರು ಬೇರೆ ವಿಮಾನದಲ್ಲಿ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಟೇಕಾಫ್ ವೇಳೆಯಲ್ಲೇ ಪಕ್ಷಿ ಡಿಕ್ಕಿ ಹೊಡೆದಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ತಕ್ಷಣ ವಿಮಾನವನ್ನು ನಿಯಂತ್ರಣ ಮಾಡಿದ ಪೈಲಟ್ ರನ್ವೇಯಲ್ಲೇ ವಿಮಾನವನ್ನು ಲ್ಯಾಂಡ್ ಮಾಡಿದ್ದಾರೆ.