ವಾರಂಟ್ ಜಾರಿಯಾಗುತ್ತಿದಂತೆ ಇಂದು ಬೆಳಗ್ಗೆ ನಾಸಿಕ್ ಪೊಲೀಸ್ ತಂಡ, ಕೇಂದ್ರ ಸಚಿವ ರಾಣೆ ಅವರನ್ನು ಬಂಧಿಸಲು ಅವರು ಪ್ರಸ್ತುತ ಜನ ಆಶೀರ್ವಾದ ಯಾತ್ರೆ ನಡೆಸುತ್ತಿರುವ ರತ್ನಗಿರಿ ಜಿಲ್ಲೆಗೆ ತೆರಳಿದ್ದಾರೆ.
ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ಸೋಮವಾರ ರಾಯಗಡದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ನಾರಾಯಣ ರಾಣೆ ಹೇಳಿದ್ದರು.
ಈ ಮಧ್ಯೆ ರಾಣೆ ಅವರು ಸಿಎಂ ವಿರುದ್ಧದ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ತಾವು ಸಿಎಂ ವಿರುದ್ಧ ಹೇಳಿಕೆ ನೀಡುವ ಮೂಲಕ ಯಾವುದೇ ಅಪರಾಧ ಮಾಡಿಲ್ಲ ಎಂದು ಹೇಳಿದ್ದಾರೆ.
ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಧ್ವಜಾರೋಹಣ ನಡೆಸಿ ಭಾಷಣ ಮಾಡುತ್ತಿದ್ದ ವೇಳೆ ಸ್ವಾತಂತ್ರ್ಯ ಲಭಿಸಿದ ವರ್ಷವನ್ನು ಪಕ್ಕದವರಿಂದ ಕೇಳಿ ತಿಳಿದುಕೊಂಡು ಹೇಳಿದ್ದರು. ಇದನ್ನು ಉಲ್ಲೇಖಿಸಿ ರಾಣೆ ಹೇಳಿಕೆ ನೀಡಿದ್ದರು.
ರಾಣೆ ಹೇಳಿಕೆಗೆ ಶಿವಸೇನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸಚಿವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದೆ