ದೇಶ

ವಿವಾದತ್ಮಕ ಹೇಳಿಕೆ ನೀಡಿದ್ದ ಕೇ0ದ್ರ ಸಚಿವ ನಾರಾಯಣ ರಾಣೆ ವಿರುದ್ದ ವಾರೆಂಟ್ ಜಾರಿ

ಮುಂಬೈ :  ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರ ವಿರುದ್ಧ ನಾಶಿಕ್ ಪೊಲೀಸ್ ಆಯುಕ್ತ ದೀಪಕ್ ಪಾಂಡೆ ಅವರು ಮಂಗಳವಾರ ಬಂಧನ ವಾರಂಟ್ ಜಾರಿಗೊಳಿಸಿದ್ದಾರೆ.

ವಾರಂಟ್ ಜಾರಿಯಾಗುತ್ತಿದಂತೆ ಇಂದು ಬೆಳಗ್ಗೆ ನಾಸಿಕ್ ಪೊಲೀಸ್ ತಂಡ, ಕೇಂದ್ರ ಸಚಿವ ರಾಣೆ ಅವರನ್ನು ಬಂಧಿಸಲು ಅವರು ಪ್ರಸ್ತುತ ಜನ ಆಶೀರ್ವಾದ ಯಾತ್ರೆ ನಡೆಸುತ್ತಿರುವ ರತ್ನಗಿರಿ ಜಿಲ್ಲೆಗೆ ತೆರಳಿದ್ದಾರೆ.

ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು ಯಾವ ವರ್ಷ ಎಂಬುದನ್ನು ತಿಳಿಯದೇ ಇರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರ
ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ಸೋಮವಾರ ರಾಯಗಡದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ನಾರಾಯಣ ರಾಣೆ ಹೇಳಿದ್ದರು.

ಈ ಮಧ್ಯೆ ರಾಣೆ ಅವರು ಸಿಎಂ ವಿರುದ್ಧದ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ತಾವು ಸಿಎಂ ವಿರುದ್ಧ ಹೇಳಿಕೆ ನೀಡುವ ಮೂಲಕ ಯಾವುದೇ ಅಪರಾಧ ಮಾಡಿಲ್ಲ ಎಂದು ಹೇಳಿದ್ದಾರೆ.

ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಧ್ವಜಾರೋಹಣ ನಡೆಸಿ ಭಾಷಣ ಮಾಡುತ್ತಿದ್ದ ವೇಳೆ ಸ್ವಾತಂತ್ರ್ಯ ಲಭಿಸಿದ ವರ್ಷವನ್ನು ಪಕ್ಕದವರಿಂದ ಕೇಳಿ ತಿಳಿದುಕೊಂಡು ಹೇಳಿದ್ದರು. ಇದನ್ನು ಉಲ್ಲೇಖಿಸಿ ರಾಣೆ ಹೇಳಿಕೆ ನೀಡಿದ್ದರು.

ರಾಣೆ ಹೇಳಿಕೆಗೆ ಶಿವಸೇನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸಚಿವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದೆ

Raksha Deshpande

Recent Posts

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

5 mins ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

54 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

1 hour ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

1 hour ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

2 hours ago