Categories: ದೇಶ

ವಿವಿಐಪಿಗಳ ಭದ್ರತೆಗೆಂದು ಇದೇ ಮೊದಲ ಬಾರಿಗೆ ಮಹಿಳಾ ಕಮಾಂಡೋಗಳ ಸಜ್ಜು

ದೇಶದ ಅನೇಕ ವಿವಿಐಪಿಗಳ ಭದ್ರತೆಗೆಂದು ಇದೇ ಮೊದಲ ಬಾರಿಗೆ ಮಹಿಳಾ ಕಮಾಂಡೋಗಳನ್ನು ಕೇಂದ್ರ ಮೀಸಲು ಪೊಲೀಸ್ ಪಡೆ ಸಜ್ಜುಗೊಳಿಸುತ್ತಿದೆ. ಮೊದಲ ಬ್ಯಾಚ್ ಇದಾಗಿದ್ದು, ಮಹಿಳಾ ಸಿಬ್ಬಂದಿಯ ಪಡೆ 10 ವಾರಗಳ ತರಬೇತಿ ಆರಂಭಿಸಿದೆ.

ತರಬೇತಿಯಲ್ಲಿ 33 ಮಹಿಳೆಯರಿದ್ದಾರೆ. ಕಟ್ಟುನಿಟ್ಟಿನ ಪ್ರಕ್ರಿಯೆಗಳನ್ನು ದಾಟಿ ಈ 33 ಮಂದಿಯನ್ನು ಆರಿಸಲಾಗಿದೆ. ಇವರಲ್ಲಿ ಸಿಬ್ಬಂದಿ, ಸಬ್‌ಇನ್ಸ್‌ಪೆಕ್ಟರ್‌ವರೆಗೂ ಭಿನ್ನ ಸಾಮರ್ಥ್ಯಗಳಲ್ಲಿ ಕೆಲಸ ನಿರ್ವಹಿಸುವವರಿದ್ದಾರೆ.

ಗ್ರೇಟರ್ ನೊಯ್ಡಾದಲ್ಲಿ ತರಬೇತಿ ನಡೆಯುತ್ತಿದ್ದು, ಎಕೆ-47 ಮತ್ತು ಸುಸಜ್ಜಿತ ಶಸ್ತ್ರಗಳನ್ನು ತರಬೇತಿಗೆ ಬಳಸಲಾಗುತ್ತಿದೆ. ಮಹಿಳೆಯರ ಆರು ಬೆಟಾಲಿಯನ್‌ಗಳನ್ನು ಸಿಆರ್‌ಪಿಎಫ್ ಹೊಂದಿದೆ. ಸದ್ಯಕ್ಕೆ ಜಮ್ಮು ಮತ್ತು ಕಾಶ್ಮೀರ, ಅಯೋಧ್ಯೆ, ಮಣಿಪುರ, ಅಸ್ಸಾಂ ಹಾಗೂ ಇತರೆ ಭಾಗಗಳಲ್ಲಿ ಕರ್ತವ್ಯಕ್ಕೆ ತನ್ನ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

Sneha Gowda

Recent Posts

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

12 mins ago

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

18 mins ago

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

32 mins ago

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

49 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

1 hour ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

1 hour ago