ಹಲವಾರು ಸ್ಪರ್ಧಿಗಳಿಗೆ ಕೋವಿಡ್ ಸೋಂಕು ತಗುಲಿರುವ ಕಾರಣ ವಿಶ್ವ ಸುಂದರಿ 2021 ಸೌಂದರ್ಯ ಸ್ಪರ್ಧೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಸ್ಪರ್ಧಿಗಳಿಗೆ ಕೋವಿಡ್ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿದ್ದು, ಹಲವಾರು ಸ್ಪರ್ಧಿಗಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಮಾನಸಾ ವಾರಣಾಸಿ ಅವರಿಗೂ ಸೋಂಕು ದೃಢಪಟ್ಟಿದೆ ಎಂದು ಮಿಸ್ ಇಂಡಿಯಾ ಸಂಸ್ಥೆ ತಿಳಿಸಿದೆ.
ಇತರೆ ಸ್ಪರ್ಧಿಗಳು, ಸಿಬ್ಬಂದಿ ಮತ್ತು ಸಾರ್ವಜನಿಕರ ಆರೋಗ್ಯವನ್ನು ಗಮನದಲ್ಲಿರಿಸಿಕೊಂಡು ಸ್ಪರ್ಧೆಯನ್ನು ಮುಂದೂಡಲಾಗಿದೆ. 90 ದಿನಗಳ ಒಳಗೆ ಮತ್ತೆ ಸ್ಪರ್ಧೆ ನಡೆಯಲಿದೆ ಎಂದು ಸಂಘಟಕರು ಮಾಹಿತಿ ನೀಡಿದ್ದಾರೆ.