Categories: ದೇಶ

ವೈದ್ಯಕೀಯ ಶಿಕ್ಷಣದಲ್ಲಿ ಹಿಂದುಳಿದ ವರ್ಗಗಳಿಗೆ ಶೇಕಡಾ 27 ರಷ್ಟು ಮೀಸಲಾತಿ ಘೋಷಿಸಿದ ಕೇಂದ್ರ ಸರ್ಕಾರ

 

ನವದೆಹಲಿ, : ವೈದ್ಯಕೀಯ ಶಿಕ್ಷಣದಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಶೇ.27ರಷ್ಟು ಮೀಸಲಾತಿ ನೀಡಿ ಕೇಂದ್ರ ಸರ್ಕಾರ ಮಹತ್ವದ ಆದೇಶ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮೀಸಲಾತಿ ಘೋಷಿಸಿದೆ. ಇದರಲ್ಲಿ ಪ್ರಮುಖಾಗಿ ಒಬಿಸಿ ವಿಭಾಗಕ್ಕೆ ಶೇ. 27 ಹಾಗೂ ಆರ್ಥಿಕ ದುರ್ಬಲರಿಗೆ ಶೇ. 10 ರಷ್ಟು ಮೀಸಲಾತಿ ನೀಡಲಾಗಿದೆ.
ಶಿಕ್ಷಣ ಕ್ಷೇತ್ರದಲ್ಲಿ ಈಗಾಗಲೇ ಮಹತ್ವದ ಬದಲಾವಣೆ ತಂದಿರುವ ಕೇಂದ್ರ ಸರ್ಕಾರ ಇದೀಗ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಈ ಮೀಸಲಾತಿ ಎಂಬಿಬಿಎಸ್ ಮತ್ತು ಬಿಡಿಎಸ್​ಗೂ ಅನ್ವಯವಾಗಲಿದೆ. ಹಾಗೇ, ಆಲ್ ಇಂಡಿಯಾ ಕೋಟಾದಡಿ ಬರುವ ಎಲ್ಲ ಸ್ನಾತಕೋತ್ತರ ವೈದ್ಯಕೀಯ ಕಾಲೇಜುಗಳಲ್ಲಿ ಕೂಡ ಓಬಿಸಿ ವಿದ್ಯಾರ್ಥಿಗಳಿಗೆ ಶೇ. 27ರಷ್ಟು ಮೀಸಲಾತಿ ನೀಡಲಾಗುವುದು. ಹಾಗೇ, ಆರ್ಥಿಕವಾಗಿ ಹಿಂದುಳಿದಿರುವವರಿಗೆ ಶೇ. 10ರಷ್ಟು ಮೀಸಲಾತಿ ನೀಡಲಾಗುವುದು. ಈ ವರ್ಷದಿಂದಲೇ ಈ ಮೀಸಲಾತಿ ಅನ್ವಯವಾಗಲಿದೆ.
1986ರಲ್ಲಿ ಅಖಿಲ ಭಾರತ ಕೋಟಾ(AIQ)ಯೋಜನೆಯನ್ನು ಪರಿಚಯಿಸಲಾಯಿತು. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಈ ಯೋಜನೆಗೆ ಜಾರಿಗೊಳಿಸಲಾಯಿತು. ಈ ಯೋಜನೆಯಲ್ಲಿ ಯಾವುದೇ ರಾಜ್ಯದ ವಿದ್ಯಾರ್ಥಿಗಳಿಗೆ ಬೇರೆ ರಾಜ್ಯದಲ್ಲಿರುವ ಉತ್ತಮ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಆಕಾಂಕ್ಷಿ ಮುಕ್ತ ಅರ್ಹತೆ ಆಧಾರಿತ ಅವಕಾಶಗಳನ್ನು ಒದಗಿಸುತ್ತದೆ.ಅಖಿಲ ಭಾರತ ಕೋಟಾ ಒಟ್ಟು ಯುಜಿ ಸೀಟುಗಳಲ್ಲಿ ಶೇ.15 ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಿರುವ ಒಟ್ಟು ಪಿಜಿ ಸೀಟುಗಳಲ್ಲಿ ಶೇ.50 ಅನ್ನು ಒಳಗೊಂಡಿದೆ. 1986 ರಿಂದ 2007ರ ವರೆಗೆ AIQ ಕೋಟಾದಲ್ಲಿ ಯಾವುದೇ ಮೀಸಲು ಇರಲಿಲ್ಲ. 2007ರಲ್ಲಿ ಸುಪ್ರೀಂ ಕೋರ್ಟ್, ಎಸ್‌ಸಿ ವಿಭಾಗಕ್ಕೆ ಶೇ. 15 ಹಾಗೂ ಎಸ್‌ಟಿ ವಿಭಾಗಕ್ಕೆ ಶೇ. 7.5 ರಷ್ಟು ಮೀಸಲಾತಿ ನೀಡಲಾಗಿತ್ತು.
ಪ್ರಸಕ್ತ ಶೈಕ್ಷಣಿಗೆ ವರ್ಷ 2021-22 ರಿಂದ ಪದವಿಪೂರ್ವ ಮತ್ತು ಸ್ನಾತಕೋತ್ತರ ವೈದ್ಯಕೀಯ, ದಂತ ಕೋರ್ಸ್((ಎಂಬಿಬಿಎಸ್ / ಎಂಡಿ / ಎಂಎಸ್ / ಡಿಪ್ಲೊಮಾ / ಬಿಡಿಎಸ್ / ಎಂಡಿಎಸ್) ಕೋರ್ಸ್‌ಗಳಿಗೆ ಈ ಮೀಸಲಾತಿ ಅನ್ವಯವಾಗಲಿದೆ. ಕೇಂದ್ರದ ಈ ನಿರ್ಧಾರದಿಂದ ಪ್ರತಿ ವರ್ಷ ಎಂಬಿಬಿಎಸ್‌ನಲ್ಲಿ ಸುಮಾರು 1500 ಒಬಿಸಿ ವಿದ್ಯಾರ್ಥಿಗಳಿಗೆ ಮತ್ತು ಸ್ನಾತಕೋತ್ತರ ಪದವಿಯಲ್ಲಿ 2500 ಒಬಿಸಿ ವಿದ್ಯಾರ್ಥಿಗಳಿಗೆ, ಸುಮಾರು 550 ಇಡಬ್ಲ್ಯೂಎಸ್ ವಿದ್ಯಾರ್ಥಿಗಳಿಗೆ ಮತ್ತು ಸ್ನಾತಕೋತ್ತರ ಪದವೀಧರರಲ್ಲಿ ಸುಮಾರು 1000 ಇಡಬ್ಲ್ಯೂಎಸ್ ವಿದ್ಯಾರ್ಥಿಗಳಿಗೆ ಇದು ಸಹಾಯವಾಗಲಿದೆ.

Indresh KC

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

6 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

6 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

7 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

7 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

7 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

7 hours ago