ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿದ ಆರೋಪದಲ್ಲಿ ಜೈಲು ಸೇರಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
3 ದಿನಗಳ ಪರ-ವಿರೋಧ ವಕೀಲರ ವಾದವನ್ನು ಆಲಿಸಿದ ನ್ಯಾಯಮೂರ್ತಿ ನಿತಿನ್ ಸಾಂಬ್ರೆ, ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಮೂವರಿಗೆ ಜಾಮೀನು ನೀಡುವುದಕ್ಕೆ ಅನುಮತಿ ನೀಡಿದೆ.
ಬಾಂಬೆ ಹೈಕೋರ್ಟ್ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್, ಮುನ್ಮುನ್ ಧಮೇಚಾ ಅವರಿಗೆ ಜಾಮೀನು ಮಂಜೂರು ಮಾಡಿದೆ. ಆರ್ಯನ್ ಖಾನ್ ಪರವಾಗಿ ಮುಕುಲ್ ರೋಹಟಗಿ ನ್ಯಾಯಾಲಯದಲ್ಲಿ ವಾದಿಸಿದರು.