Categories: ದೇಶ

‘ಶಿಕ್ಷಕ ಪರ್ವ’ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಿಡಿಯೊ ಕಾನ್ಫರೆನ್ಸ್‌ ಮೂಲಕ ‘ಶಿಕ್ಷಕ ಪರ್ವ’ವನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ‘ಈ ಕಾರ್ಯಕ್ರಮಗಳು ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿಸುವುದಲ್ಲದೇ ಯುವಕರ ಭವಿಷ್ಯವನ್ನು ರೂಪಿಸಲಿದೆ. ಇದು ದೇಶವನ್ನು ರೂಪಿಸುವಲ್ಲಿಯೂ ಪ್ರಮಖ ಪಾತ್ರವಹಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭಾರತೀಯ ಸಂಜ್ಞೆ ಭಾಷೆ ನಿಘಂಟು(ಯುನಿವರ್ಸಲ್ ಡಿಸೈನ್ ಆಫ್ ಲರ್ನಿಂಗ್‌ಗೆ ಅನುಗುಣವಾಗಿ ಶ್ರವಣ ದೋಷವುಳ್ಳವರಿಗಾಗಿ ರೂಪಿಸಲಾದ ಆಡಿಯೊ–ಪಠ್ಯ ಎಂಬೆಡೆಡ್‌ ಸಂಜ್ಞೆ ಭಾಷೆ ವಿಡಿಯೊ), ಟಾಕಿಂಗ್‌ ಬುಕ್‌ (ದೃಷ್ಟಿದೋಷವುಳ್ಳವರಿಗಾಗಿ ಆಡಿಯೊ ಪುಸ್ತಕ), ನಿಪುಣ್‌ ಭಾರತ್‌ ಮತ್ತು ವಿದ್ಯಾಂಜಲಿ ಪೋರ್ಟಲ್‌ಗೆ ಪ್ರಧಾನಿ ಅವರು ಚಾಲನೆ ನೀಡಿದರು.

ಕಳೆದ ಏಳು ವರ್ಷಗಳಲ್ಲಿ ಸರ್ಕಾರದ ನಿರ್ಧಾರಗಳಲ್ಲಿ ಜನರು ಪ್ರಮುಖ ಪಾತ್ರವಹಿಸಿದ್ದಾರೆ. ಜನರ ಸಹಭಾಗಿತ್ವ ಇಲ್ಲದೇ ಸ್ವಚ್ಛ ಭಾರತದಂತಹ ಕಾರ್ಯಕ್ರಮಗಳು ಯಶಸ್ವಿಯಾಗುತ್ತಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

 

Sampriya YK

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

4 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

5 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

5 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

5 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

6 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

7 hours ago