ದಕ್ಷಿಣ ಕಾಶ್ಮೀರ : ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಚಿತ್ರಗಂ ಗ್ರಾಮದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್ಕೌಂಟರ್ನಲ್ಲಿ ಒಬ್ಬ ಭಯೋತ್ಪಾದಕ ಹತ್ಯೆಯಾಗಿದ್ದಾನೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕಾಶು ಚಿತ್ರಗಂ ಪ್ರದೇಶದಲ್ಲಿ ಉಗ್ರರು ಇರುವುದನ್ನು ಭದ್ರತಾ ಪಡೆಗಳು ಖಚಿತ ಪಡಿಸಿಕೊಂಡಿದ್ದವು. ನಂತರ ಆ ಪ್ರದೇಶವನ್ನು ಸುತ್ತುವರಿದಿದ್ದು, ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ನಡೆದಿದೆ. ಸೇನೆ ಓರ್ವ ಉಗ್ರನನ್ನು ಹತ್ಯೆ ಮಾಡಿದೆ