ದೇಶ

ಸಂತ್ರಸ್ತೆ ಹೆಸರು ಬಹಿರಂಗ: ಸಲ್ಮಾನ್‌, ಅಕ್ಷಯ್‌ ಸೇರಿದಂತೆ 38 ಮಂದಿ ವಿರುದ್ಧ ದೂರು

ಮುಂಬೈ: 2019 ರಲ್ಲಿ ಹೈದರಾಬಾದ್‌ನಲ್ಲಿ ನಡೆದಿದ್ದ ದಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಹೆಸರು ಬಹಿರಂಗ ಪಡಿಸಿದ್ದಕ್ಕಾಗಿ ಬಾಲಿವುಡ್ ನಟರಾದ ಸಲ್ಮಾನ್ ಖಾನ್, ಅಕ್ಷಯ್ ಕುಮಾರ್ ಸೇರಿದಂತೆ 38 ನಟ–ನಟಿಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರು ದಾಖಲಾಗಿದೆ.

ದೆಹಲಿ ಮೂಲದ ಗೌರವ್ ಗುಲಾಟಿ ಎಂಬ ವಕೀಲರು ದೆಹಲಿಯ ಸಬ್ಜಿ ಮಂಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದಿಶಾ ಅತ್ಯಾಚಾರ ಪ್ರಕರಣದಲ್ಲಿ, ಜವಾಬ್ದಾರಿಯುತ ನಾಗರಿಕರಾಗಿರಬೇಕಾದವರು ಸಂತ್ರಸ್ತೆಯ ನಿಜವಾದ ಹೆಸರು ಹಾಗೂ ಊರು ಬಹಿರಂಗಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಈ ಕುರಿತು ತೀಸ್ ಹಜಾರಿ ನ್ಯಾಯಾಲಯದಲ್ಲಿ ಅರ್ಜಿ ಕೂಡ ದಾಖಲಿಸಿದ್ದಾರೆ.

ಅನುಪಮ್ ಖೇರ್, ಪರ್ಹಾನ್ ಅಕ್ತರ್, ಅಜಯ್ ದೇವಗನ್, ಅಕ್ಷಯ್ ಕುಮಾರ್, ಸಲ್ಮಾನ್ ಖಾನ್, ರವಿ ತೇಜ, ರಾಕುಲ್ ಪ್ರೀತ್ ಸಿಂಗ್, ಅಲ್ಲು ಸೀರಿಶ್, ಚಾರ್ಮಿ ಕೌರ್ ಸೇರಿದಂತೆ 38 ನಟ ನಟಿಯರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸಂತ್ರಸ್ತೆಯ ನಿಜವಾದ ಹೆಸರು ಬಹಿರಂಗಪಡಿಸಿ ಕಾನೂನು ಉಲ್ಲಂಘಿಸಿದ್ದಾರೆ ಎಂದು ವಕೀಲ ಗುಲಾಟಿ ಆರೋಪಿಸಿದ್ದಾರೆ.

Sampriya YK

Recent Posts

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

3 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

6 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

23 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

28 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

36 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

53 mins ago