Categories: ದೇಶ

ಸಂಸದ ಪಶುಪತಿ ಪಾರಸ್ ಮಂತ್ರಿಸ್ಥಾನ ಪ್ರಶ್ನಿಸಿ ಚಿರಾಗ್‌ ಪಾಸ್ವಾನ್‌ ದೆಹಲಿ ಹೈಕೋರ್ಟ್ ಗೆ

ನವದೆಹಲಿ, : ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟದಲ್ಲಿ ತಮ್ಮ ಚಿಕ್ಕಪ್ಪ ಹಾಗೂ ಬಿಹಾರದ ಹಾಜಿಪುರ್ ಸಂಸದ ಪಶುಪತಿ ಕುಮಾರ್ ಪಾರಸ್ ರನ್ನು ಸೇರ್ಪಡೆ ಮಾಡಿಕೊಂಡಿರುವುದನ್ನು ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ದೆಹಲಿ ಹೈಕೋರ್ಟ್ ಮೊರೆ ಹೋಗುವುದಾಗಿ ಚಿರಾಗ್ ಪಾಸ್ವಾನ್ ಎಚ್ಚರಿಕೆ ನೀಡಿದ್ದಾರೆ. ಬಿಹಾರ ರಾಜಕಾರಣದಲ್ಲಿ ನಡೆದ ಇತ್ತೀಚಿನ ಬೆಳವಣಿಗೆ ಪಾಸ್ವಾನ್ ಹಾಗೂ ಪಾರಸ್ ನಡುವಿನ ವೈಮನಸ್ಸಿಗೆ ಕೈಗನ್ನಡಿಯಾಗಿತ್ತು.
ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆ ವೇಳೆ ಬಿಹಾರದಲ್ಲಿ ಲೋಕ ಜನಶಕ್ತಿ ಪಕ್ಷದಿಂದ ಆರು ಸಂಸದರು ಆಯ್ಕೆ ಆಗಿದ್ದರು. ಲೋಕ ಜನಶಕ್ತಿ ಪಕ್ಷದ ಆರು ಸಂಸದರ ಪೈಕಿ ಐದು ಸಂಸದರು ಚಿರಾಗ್ ಪಾಸ್ವಾನ್ ಚಿಕ್ಕಪ್ಪ( ರಾಮ್ ವಿಲಾಸ್ ಪಾಸ್ವಾನ್ ಸಹೋದರ) ಪಶುಪತಿ ಕುಮಾರ್ ಪಾರಸ್ ಅನ್ನು ಬೆಂಬಲಿಸಿದ್ದರು. ಚಿರಾಗ್ ಪಾಸ್ವಾನ್ ವಿರುದ್ಧ ದಂಗೆ ಎದ್ದಿ ಐದು ಸಂಸದರನ್ನು ದಿಢೀರ್ ಬೆಳವಣಿಗೆಯೊಂದರಲ್ಲಿ ಪಕ್ಷದಿಂದಲೇ ಉಚ್ಛಾಟಿಸಲಾಗಿತ್ತು.
ಪಶುಪತಿ ಕುಮಾರ್ ಪಾರಸ್, ಶ್ರೀಮತಿ ಬೀನಾ ದೇವಿ, ಚೌಧರಿ ಮೆಹಬೂಬ್ ಅಲಿ ಕೈಸೆರ್, ಚಂದನ್ ಸಿಂಗ್, ಪ್ರಿನ್ಸ್ ರಾಜ್ ಅನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನದಿಂದಲೇ ಉಚ್ಛಾಟಿಸಲಾಗಿತ್ತು.
ಸಂಸದ ಪಶುಪತಿ ಕುಮಾರ್ ಪಾರಸ್ ಅನ್ನು ಲೋಕ ಜನಶಕ್ತಿ ಪಕ್ಷದ ಸದಸ್ಯರು ಎಂದು ಪರಿಗಣಿಸಿರುವ ಲೋಕಸಭಾ ಸಭಾಪತಿ ನಿರ್ಧಾರವನ್ನು ಪ್ರಶ್ನಿಸಿ ಉಚ್ಛ ನ್ಯಾಯಾಲಯದ ಮೊರೆ ಹೋಗಲಾಗುತ್ತದೆ ಎಂದು ಸಂಸದ ಚಿರಾಗ್ ಪಾಸ್ವಾನ್ ಸರಣಿ ಟ್ವೀಟ್ ಮಾಡಿದ್ದಾರೆ.
“ಲೋಕಸಭೆಯ ಸ್ಪೀಕರ್ ತೀರ್ಪಿನ ವಿರುದ್ಧ ಲೋಕ ಜನಶಕ್ತಿ ಪಕ್ಷವು ಇಂದು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ, ಇದರಲ್ಲಿ ಉಚ್ಚಾಟಿತ ಸಂಸದ ಪಶುಪತಿ ಪರಸ್ ಜಿ ಅನ್ನು ಸದನದಲ್ಲಿ ಎಲ್ ಜೆಪಿ ನಾಯಕರಾಗಿ ಪರಿಗಣಿಸಲಾಗಿದೆ. ಪಕ್ಷಕ್ಕೆ ದ್ರೋಹ ಬಗೆದಿದ್ದಕ್ಕಾಗಿ ಪಶುಪತಿಯನ್ನು ಈಗಾಗಲೇ ಲೋಕ ಜನಶಕ್ತಿ ಪಕ್ಷದಿಂದ ಹೊರಹಾಕಲಾಗಿದೆ. ಈಗ ಅವರನ್ನು ಕೇಂದ್ರ ಸಚಿವ ಸಂಪುಟಕ್ಕೆ ಸೇರಿಸಲು ಪಕ್ಷ ಬಲವಾಗಿ ಆಕ್ಷೇಪಿಸಿದೆ,” ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

Indresh KC

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

7 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

7 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

7 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

8 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

8 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

8 hours ago