ಸದ್ದು – ಗದ್ದಲದಲ್ಲೇ ಕೊನೆಗೊಂಡ ಕಲಾಪ

ನವದೆಹಲಿ : ಪೆಗಾಸಸ್ ವಿವಾದ , ಕೋವಿಡ್ ನಿರ್ವಹಣೆ ಸೇರಿದಂತೆ ಮತ್ತಿತರ ವಿಷಯಗಳು ಲೋಕಸಭೆಯಲ್ಲಿ ಸತತ 23 ದಿನಗಳಿಂದಲೂ ಪ್ರತಿಧ್ವನಿಸಿ ಯಾವುದೇ ವಿಷಯಗಳ ಚರ್ಚೆ ಇಲ್ಲದೇ ಅಂತ್ಯಗೊಂಡಿದೆ. ಇಂದೂ ಕೂಡ ಭಾರೀ ಗದ್ದಲ-ಕೋಲಾಹಲ ಸೃಷ್ಟಿಯಾದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಕಲಾಪವನ್ನು ಮೊಟಕುಗೊಳಿಸಿ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

ಕಲಾಪ ಆರಂಭವಾಗುತ್ತಿದ್ದಂತೆಯೇ ಇಂದೂ ಕೂಡ ಸಂಸತ್ತಿನ ಉಭಯ ಸದನಗಳಲ್ಲಿ ವಿರೋಧ ಪಕ್ಷಗಳ ಸದಸ್ಯರು ಪೆಗಾಸಸ್‌, ಕೋವಿಡ್ ವಿರ್ವಹಣೆ ಹಾಗೂ ನೂತನ ಕೃಷಿ ಕಾಯ್ದೆಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದ ಗದ್ದಲ ಉಂಟಾದ ಪರಿಣಾಮ ಲೋಕಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.

ಜುಲೈ 19ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭಗೊಂಡಿತ್ತು. ಆಗಸ್ಟ್ 13ರವರೆಗೂ ಅಧಿವೇಶನ ನಡೆಯಬೇಕಿತ್ತು.

Raksha Deshpande

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

4 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

4 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

4 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

4 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

5 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

5 hours ago