ಕೊಯಮತ್ತೂರು: ಮಹಿಳಾ ಸಹೋದ್ಯೋಗಿಗೆ ಲೈಂಗಿಕವಾಗಿ ಕಿರುಕುಳ ನೀಡಿದ ಆರೋಪದ ಮೇಲೆ ವೈಮಾನಿಕ ಅಧಿಕಾರಿಯೊಬ್ಬರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಕೃತ್ಯ 15 ದಿನದ ಹಿಂದೆ ನಡೆದಿತ್ತು.
ಅಧಿಕಾರಿಯನ್ನು ಕೋರ್ಟ್ಗೆ ಹಾಜರುಪಡಿಸಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಸದ್ಯ ಆರೋಪಿಯನ್ನು ತಿರುಪುರ್ ಜಿಲ್ಲೆಯ ಉದುಮಾಲ್ಪೇಟ್ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಯುಪಡೆಯ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ಮಹಿಳೆಯು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಯು ಮೂಲತಃ ಛತ್ತೀಸಗಡದವರು ಎಂದು ತಿಳಿಸಿದ್ದಾರೆ.