ದೇಶ

ಸುಪ್ರೀಂಕೋರ್ಟ್‌ಗೆ 9 ನ್ಯಾಯಮೂರ್ತಿಗಳ ನೇಮಕಕ್ಕೆ ರಾಷ್ಟ್ರಪತಿ ಅಂಕಿತ

ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಸುಪ್ರೀಂ ಕೋರ್ಟ್ ನ ಕೊಲಿಜಿಯಂ ಶಿಫಾರಸು ಮಾಡಿದ್ದ ಮೂವರು ಮಹಿಳೆಯರು ಸೇರಿದಂತೆ ಎಲ್ಲಾ 9 ಹೆಸರುಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಅಂಕಿತ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದರಲ್ಲಿ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ಬಿ. ವಿ. ನಾಗರತ್ನ, ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ, ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಿಮಾ ಕೊಹ್ಲಿ, ಜಸ್ಟೀಸ್  ಸಿ.ಟಿ. ರವಿಕುಮಾರ್, ಎಂಎಂ ಸುಂದರೇಶ್ ಮತ್ತು ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ.ಎಸ್. ನರಸಿಂಹ ಅವರ ಹೆಸರು ಪಟ್ಟಿಯಲ್ಲಿದೆ.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ, ವಿಕ್ರಮ್ ನಾಥ್ ಮತ್ತು ಜೀತೇಂದ್ರ ಕುಮಾರ್ ಮಹೇಶ್ವರಿ ಅವರ ಹೆಸರನ್ನು ಕೂಡಾ ಕೊಲಿಜಿಯಂ ಶಿಫಾರಸು ಮಾಡಿತ್ತು.

ಈ ಪೈಕಿ ಕರ್ನಾಟಕದ  ನ್ಯಾಯಮೂರ್ತಿ ಬಿ.ವಿ. ನಾಗರತ್ನ  ಅವರು ದೇಶದ ಮೊದಲ ಮಹಿಳಾ ಮುಖ್ಯ  ನ್ಯಾಯಮೂರ್ತಿಯಾಗಿ ನೇಮಕವಾಗುವ ಸಾಧ್ಯತೆ ಹೆಚ್ಚಿದೆ.

Sampriya YK

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago