News Karnataka Kannada
Monday, May 06 2024
ದೇಶ

ಸೋಮವಾರ ರೈತರಿಗೆ 19,500 ಕೋಟಿ ರೂಪಾಯಿ ನೇರ ನಗದು ವರ್ಗಾವಣೆ

Narendramodi Padmaaward 11072021
Photo Credit :

ನವದೆಹಲಿ, – ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆಯಡಿ ದೇಶದ 9.75 ಕೋಟಿ ರೈತರಿಗೆ 19.5 ಸಾವಿರ ಕೋಟಿ ರೂಪಾಯಿಗಳನ್ನು ಇಂದು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ವರ್ಚುವಲ್ ಸಭೆಯ ಮೂಲಕ ಹಣ ಪಾವತಿಗೆ ಚಾಲನೆ ನೀಡಿದರು. ಕಿಸಾನ್ ಸನ್ಮಾನ್ ನಿಧಿ ಯೋಜನೆಯಡಿ ವಾರ್ಷಿಕ ಆರು ಸಾವಿರ ಕೋಟಿ ರೂಪಾಯಿಗಳನ್ನು ರೈತರ ಖಾತೆಗೆ ಪಾವತಿ ಮಾಡಲಾಗುತ್ತದೆ.
ನಾಲ್ಕು ತಿಂಗಳಿಗೊಮ್ಮೆ ಮೂರು ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿಗಳನ್ನು ಪಾವತಿಸುವ ಈ ಯೋಜನೆಯನ್ನು 2019ರ ಫೆಬ್ರವರಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಣೆ ಮಾಡಿದರು. ಈವರೆಗೂ ಯೋಜನೆಯಡಿ 1.57 ಲಕ್ಷ ಕೋಟಿ ರೂಪಾಯಿಗಳನ್ನು ರೈತರಿಗೆ ಪಾವತಿಸಲಾಗಿದೆ.ಪ್ರಧಾನ ಮಂತ್ರಿ ಅವರ ಸಮ್ಮುಖದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು, ಈವರೆಗೂ ಒಂಬತ್ತು ಕಂತುಗಳಲ್ಲಿ 11 ಕೋಟಿ ರೈತರಿಗೆ 1.37 ಲಕ್ಷ ಕೋಟಿ ರೂಪಾಯಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಹೇಳಿದರು. ಕಿಸಾನ್ ಸನ್ಮಾನ್ ನಿಧಿಯ 2.28 ಕೋಟಿ ಫಲಾನುಭವಿಗಳನ್ನು ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯಕ್ಕೆ ಸಂಪರ್ಕಿಸಲಾಗಿದೆ.
ಅವರು ಈವೆಗೂ 2.32 ಕೋಟಿ ರೂಪಾಯಿ ಸಾಲ ಪಡೆದಿದ್ದಾರೆ. ಕೋವಿಡ್ ಸಂಕಷ್ಟ ಸಮಯದಲ್ಲೂ ರೈತರು ಕಷ್ಟ ಪಟ್ಟು ಕೆಲಸ ಮಾಡಿದ್ದಾರೆ. ಹಾಗಾಗಿ ಮುಂದಿನ ಬಾರಿ ಬಂಪರ್ ಬೆಲೆ ಬರುವ ನಿರೀಕ್ಷೆ ಇದೆ ಎಂದು ತೋಮರ್ ಹೇಳಿದರು.ದೇಶದಲ್ಲಿ ಅಡುಗೆ ಎಣ್ಣೆ ಮತ್ತು ದ್ವಿದಳ ಧಾನ್ಯಗಳ ಕೊರತೆ ಕಂಡು ಬಂದಿದೆ. ಮುಂದಿನ ದಿನಗಳಲ್ಲಿ ಅದರ ಕುರಿತಂತೆ ಗಮನ ಹರಿಸಿ ಹೆಚ್ಚಿನ ಉತ್ಪಾದನೆಗೆ ಆದ್ಯತೆ ನೀಡಲಾಗುವುದು ಎಂದರು. ಕೃಷಿ ಇಲಾಖೆಯ ರಾಜ್ಯ ಸಚಿವರಾದ ಕೈಲಾಶ್ ಚೌದರಿ, ಶೋಭಾ ಕರಂದ್ಲಾಜೆ, ಕೃಷಿ ಇಲಾಖೆ ಕಾರ್ಯದರ್ಶಿ ಸಂಜಯ್ ಅಗರ್‍ವಾಲ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು