News Karnataka Kannada
Saturday, May 04 2024
ದೇಶ

`ಸ್ವಚ್ಛ ಭಾರತ ಯೋಜನೆ-ನಗರ 2.0ʼಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ

Narendramodi Padmaaward 11072021
Photo Credit :

ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು `ಸ್ವಚ್ಛ ಭಾರತ ಯೋಜನೆ-ನಗರ 2.0ʼ ಮತ್ತು ʻಅಟಲ್ ನಗರ ಪುನರುಜ್ಜೀವ ಮತ್ತು ಪರಿವರ್ತನೆ ಯೋಜನೆ 2.0ʼಗೆ  2021ರ ಅಕ್ಟೋಬರ್ 1ರಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ  ಚಾಲನೆ ನೀಡಲಿದ್ದಾರೆ.

ಪ್ರಧಾನಮಂತ್ರಿಯವರ ದೂರದೃಷ್ಟಿಗೆ ಅನುಗುಣವಾಗಿ, ನಮ್ಮ ಎಲ್ಲಾ ನಗರಗಳನ್ನು ‘ಕಸ ಮುಕ್ತ’ಗೊಳಿಸುವ  ಮತ್ತು ‘ಜಲ ಸುರಕ್ಷಿತ’ ಮಾಡುವ ಆಕಾಂಕ್ಷೆಯನ್ನು ಸಾಕಾರಗೊಳಿಸಲು ʻಸ್ವಚ್ಛ ಭಾರತ್‌ ಯೋಜನೆ-ನಗರ 2.0ʼ  ಮತ್ತು ʻಅಮೃತ್ 2.0ʼ ಅನ್ನು ವಿನ್ಯಾಸಗೊಳಿಸಲಾಗಿದೆ. ಈ ಪ್ರಮುಖ ಯೋಜನೆಗಳು ತ್ವರಿತ ನಗರೀಕರಣಕ್ಕೆ ಸಾಕ್ಷಿಯಾಗುತ್ತಿರುವ ಭಾರತದ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿವೆ. ಜೊತೆಗೆ ʻಸುಸ್ಥಿರ ಅಭಿವೃದ್ಧಿ ಗುರಿಗಳು 2030ʼ ಸಾಧನೆಗೆ ಸಹಾಯ ಮಾಡುತ್ತವೆ.

ಕೇಂದ್ರ ಸಚಿವರು, ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಹಾಯಕ ಸಚಿವರು,  ರಾಜ್ಯಗಳು  ಮತ್ತು ಕೇಂದ್ರಾಡಳಿತ ಪ್ರದೇಶಗಳ ನಗರಾಭಿವೃದ್ಧಿ ಸಚಿವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು