Categories: ದೇಶ

ಹಬ್ಬದ ದಿನಗಳಲ್ಲಿ ಎಚ್ಚರಿಕೆಯಿಂದ ವರ್ತಿಸಿ: ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ

ದೇಶದ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಆಡಳಿತಾಧಿಕಾರಿಗಳಿಗೆ ಹಬ್ಬದ ಸಂದರ್ಭದಲ್ಲಿ ಸುರಕ್ಷಿತ ನಡವಳಿಕೆಗಳನ್ನು ಪಾಲಿಸುವಂತೆ ಸೂಚಿಸಿ ಮಂಗಳವಾರ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಯ್ ಭಲ್ಲ ಅವರು ಪತ್ರ ಬರೆದಿದ್ದಾರೆ.

ಮುಂಬರುವ ಹಬ್ಬಸಾಲಿನಲ್ಲಿ ದೊಡ್ಡಮಟ್ಟದಲ್ಲಿ ಜನಸಂದಣಿ ಸೇರದಂತೆ ತಡೆಯಬೇಕು. ಎಚ್ಚರಿಕೆಯಿಂದ ವರ್ತಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು. ತುಸು ಎಚ್ಚರ ತಪ್ಪಿದರೂ ಕೊರೋನಾ ಪಾಸಿಟಿವ್ ಪ್ರಮಾಣ ಹೆಚ್ಚಾಗಬಹುದು ಎಂದು ಅವರು ಎಚ್ಚರಿಸಿದ್ದಾರೆ.

ಕೋವಿಡ್-19 ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸುರಕ್ಷಿತ ರೀತಿಯಲ್ಲಿ ಹಬ್ಬವನ್ನು ಆಚರಿಸಬೇಕು ಎಂದು ಸಲಹೆ ಮಾಡಿದ್ದಾರೆ. ಕೋವಿಡ್ ಪ್ರಮಾಣವು ಈಚಿನ ದಿನಗಳಲ್ಲಿ ಕಡಿಮೆಯಾಗಿದೆ. ಆದರೆ ಸ್ಥಳೀಯವಾಗಿ ಇಂದಿಗೂ ಅಲ್ಲಲ್ಲಿ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗುತ್ತಿವೆ. ಎಲ್ಲ ಜಿಲ್ಲೆಗಳಲ್ಲಿಯೂ ಕೋವಿಡ್ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪಾಸಿಟಿವಿಟಿ ಪ್ರಮಾಣ, ಆಸ್ಪತ್ರೆಗಳ ಸ್ಥಿತಿಗತಿ ಮತ್ತು ಐಸಿಯು ಬೆಡ್​ ಲಭ್ಯತೆಯ ಮೇಲೆ ನಿಗಾ ಇರಿಸಬೇಕು ಎಂದು ಹೇಳಿದ್ದಾರೆ.

ಪರೀಕ್ಷೆಯ ಪ್ರಮಾಣ ಹೆಚ್ಚಿಸುವುದು, ಸೋಂಕಿತರನ್ನು ಪತ್ತೆ ಮಾಡುವುದು ಮತ್ತು ಲಸಿಕೆ ಹಾಕುವ ಪ್ರಮಾಣ ಜಾಸ್ತಿ ಮಾಡುವ ಬಗ್ಗೆ ಗಮನ ನೀಡಬೇಕು. ಲಸಿಕೆ ಪಡೆಯಲು ಅರ್ಹರಾದ ವಯೋಮಾನಗಳ ಗುಂಪುಗಳನ್ನು ಗುರುತಿಸಿ ಆದ್ಯತೆ ಮೇಲೆ ಎರಡೂ ಡೋಸ್ ಲಸಿಕೆ ಕೊಡಬೇಕು ಎಂದು ಸಲಹೆ ಮಾಡಿದ್ದಾರೆ.

Sneha Gowda

Recent Posts

ಭಯಾನಕ ದೃಶ್ಯ : ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಬೆಂಕಿ ತಗುಲಿ 10 ಮಂದಿಗೆ ಗಾಯ

  ಬೈಕ್ ಸ್ಫೋಟಗೊಂಡು ಸುಮಾರು ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಈ ಭಯಾನಕ ಘಟನೆ…

14 mins ago

ಗುಂಡ್ಲುಪೇಟೆ ಪೊಲೀಸರಿಂದ ಕಾರ್ಯಾಚರಣೆ : ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ವೇಳೆ ಗುಂಡ್ಲುಪೇಟೆ ಪೊಲೀಸರು ದಾಳಿ 2 ಕೆ.ಜಿ‌ ಗಾಂಜಾ ಸಮೇತ ಇಬ್ಬರು ಆರೋಪಿಗಳನ್ನು…

34 mins ago

13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ : ಪೊಲೀಸ್‌ ಅಲರ್ಟ್‌

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ ಭಾನುವಾರ ಇ-ಮೇಲ್‌ ಮೂಲಕ ಬೆದರಿಕಯೊಂದು ಬಂದಿದ್ದು ಅದರಂತೆ ದೇಶಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ…

41 mins ago

ಮೂರು ಕೊಲೆ ಕೇಸ್‌ : ಬೆಳ್ಳಂ ಬೆಳಗೆ ಆರೋಪಿ ಕಾಲಿಗೆ ಪೊಲೀಸ್‌ ಗುಂಡೇಟು

ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ ಕಾಲಿಗೆ…

1 hour ago

ಅಮೇರಿಕಾದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ : ಕಾರಣ ಇಲ್ಲಿದೆ

ಅಮೇರಿಕಾದಲ್ಲಿ ಎಂಡಿಎಚ್​ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…

1 hour ago

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…

2 hours ago