ದೇಶ

ಹಬ್ಬದ ವೇಳೆ ಅಡುಗೆ ಎಣ್ಣೆಯ ದರ ಕಡಿಮೆ

ಖಾದ್ಯ ತೈಲ (ಅಡುಗೆ ಎಣ್ಣೆ) ಬೆಲೆ ಹೆಚ್ಚಳದ ಕುರಿತು ಕೈ ಹಿಸುಕಿಕೊಂಡಿರುವ ಮಹಿಳೆಯರಿಗೆ ಒಂದೊಳ್ಳೆಯ ಸುದ್ದಿ ಇದೆ. ಹಬ್ಬದ ವೇಳೆ ಅಡುಗೆ ಎಣ್ಣೆಯ ದರ ಕಡಿಮೆಯಾಗಲಿದೆ. ಇದಕ್ಕಾಗಿ ಕೇಂದ್ರ ಸರಕಾರ ಸಿದ್ಧತೆ ನಡೆಸುತ್ತಿದೆ.

ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ (ಡಿಎಫ್ ಪಿಡಿ) ಎಲ್ಲ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಅ. 25ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದೆ. ಆಹಾರ ದರಗಳ ಮೇಲಿನ ಸಂಗ್ರಹ ಮಿತಿ ಆದೇಶದ ಮೇಲೆ ಕ್ರಮ ಪರಿಶೀಲಿಸುತ್ತದೆ.

ಇಲಾಖಾ ಕಾರ್ಯದರ್ಶಿ ಸುಧಾಂಶು ಪಾಂಡೆ ಎಲ್ಲ ರಾಜ್ಯಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಗ್ರಾಹಕರ ಹೊರೆ ಇಳಿಸಲು ಖಾದ್ಯ ತೈಲಗಳ ಬೆಲೆ ಕಡಿಮೆ ಮಾಡಲು ಕೇಂದ್ರವು ಕೈಗೊಂಡಿರುವ ಕ್ರಮಗಳನ್ನು ವಿವರಿಸಿದೆ. ಜೊತೆಗೆ ಹಬ್ಬದ ಋತುವನ್ನು ಗಮನದಲ್ಲಿರಿಸಿಕೊಂಡು ಸಿದ್ಧತೆ ನಡೆಸಿದೆ.

ಡಿಎಫ್ ಪಿಡಿ ಖಾದ್ಯ ತೈಲಗಳ ಬೆಲೆ ಮತ್ತು ಗ್ರಾಹಕರಿಗೆ ಅವುಗಳ ಲಭ್ಯತೆಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಮುಂಬರುವ ಹಬ್ಬದ ಋತುವಿನಲ್ಲಿ ಖಾದ್ಯ ತೈಲಗಳಿಗೆ ಬೇಡಿಕೆ ಹೆಚ್ಚಾಗುವ ಸಂದರ್ಭದಲ್ಲಿ ಇದು ಮಹತ್ವ ಪಡೆದಿದೆ. ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಖಾದ್ಯ ತೈಲ ಉದ್ಯಮ ಸಂಘಗಳೊಂದಿಗಿನ ಸಂವಹನದ ಆಧಾರದ ಮೇಲೆ ದಾಸ್ತಾನು ಮಾಹಿತಿಯನ್ನು ಒದಗಿಸಲು ಅಧಿಸೂಚನೆ ಹೊರಡಿಸಲಾಗಿದೆ.

Sneha Gowda

Recent Posts

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

5 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

17 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

22 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

36 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

58 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

1 hour ago