ಪಶ್ಚಿಮ ಬಂಗಾಳ

ಹಳ್ಳಕ್ಕೆ ಉರುಳಿದ ಬಸ್, 6 ಮಂದಿ ಸಾವು

ರಾಯ್​ಗಂಜ್ ​: ವಾಹನವೊಂದಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್​​ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು,  6 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬುಧವಾರ ರಾತ್ರಿ ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ್ ಜಿಲ್ಲೆಯ ರಾಯ್​ಗಂಜ್‌ನಲ್ಲಿ ನಡೆದಿದೆ.

ಪಶ್ಚಿಮ ಬಂಗಾಳ ಹಾಗೂ ಜಾರ್ಖಾಂಡ್ ರಾಜ್ಯದ ವಿವಿಧ ಜಿಲ್ಲೆಗಳಿಂದ 20 ಮಂದಿ ವಲಸೆ ಕಾರ್ಮಿಕರನ್ನು ಹೊತ್ತ ಖಾಸಗಿ ಬಸ್ ವೊಂದು ಉತ್ತರಪ್ರದೇಶದ ಲಖನೌಗೆ ತೆರಳುತ್ತಿತ್ತು.

ರಾಯ್ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ರುಪಾಹರ್’ನ ರಾಷ್ಟ್ರೀಯ ಹೆದ್ದಾರಿ-34ರಲ್ಲಿ ಬಸ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದಿದೆ ಎಂದು ತಿಳಿದುಬಂದಿದೆ.

ಘಟನೆ ಸಂಭವಿಸುತ್ತಿದ್ದಂತೆಯೇ ಸ್ಥಳೀಯ ನಿವಾಸಿಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ, ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, 6 ಮಂದಿ ಶವಗಳನ್ನು ಹೊರಗೆ ತೆಗೆದಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವವರನ್ನು ರಾಯ್ಗಂಜ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಲಾಕ್ಡೌನ್ ಹಿನ್ನೆಲೆಯಲ್ಲಿ ಮನೆಗಳಿಗೆ ವಾಪಸ್ಸಾಗಿದ್ದ ಕಾರ್ಮಿಕರು ಮರಳಿ ಕೆಲಸಗಳಿಗೆ ತೆರಳಲು ಬಸ್ ನಲ್ಲಿ ಸಂಚರಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

Raksha Deshpande

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

3 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago