News Karnataka Kannada
Sunday, May 05 2024
ದೇಶ

ಹಿಂದೂ ಧರ್ಮಕ್ಕೆ ಬೆದರಿಕೆಯಿದೆ ಎಂಬ ಮಾತುಗಳು ಕೇವಲ ಕಾಲ್ಪನಿಕ : ಕೇಂದ್ರ ಸರ್ಕಾರ

Hindu
Photo Credit :

ನವದೆಹಲಿ: ಹಿಂದೂ ಧರ್ಮಕ್ಕೆ ಬೆದರಿಕೆಯಿದೆ ಎಂಬ ಮಾತುಗಳು ಕೇವಲ ಕಾಲ್ಪನಿಕ ಎಂದು ಕೇಂದ್ರ ಸರ್ಕಾರ ಹೇಳಿದೆ. ಇತ್ತೀಚೆಗೆ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾದ ಪ್ರಶ್ನೆಗೆ ಕೇಂದ್ರ ಸರ್ಕಾರ ಈ ಪ್ರತಿಕ್ರಿಯೆ ನೀಡಿದ್ದು, ಹಿಂದೂ ಧರ್ಮ ಅಪಾಯದಲ್ಲಿದೆ ಎಂಬ ಹೇಳಿಕೆಯನ್ನು ತಳ್ಳಿಹಾಕಿದೆ. ಹಿಂದೂ ಧರ್ಮಕ್ಕೆ ಬೆದರಿಕೆಯಿದೆ ಎಂದು ಕಳವಳ ವ್ಯಕ್ತಪಡಿಸುವ ಯಾವುದೇ ದಾಖಲೆಗಳಾಗಲಿ, ಸಾಕ್ಷಿಗಳಾಗಲಿ ಸಿಕ್ಕಿಲ್ಲ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಹೇಳಿದೆ.

ಹಿಂದೂ ಧರ್ಮಕ್ಕೆ ಅಪಾಯವಿದೆ ಎಂಬ ಆಪಾದನೆ “ಕಾಲ್ಪನಿಕ” ಎಂದು ಕರೆಯುವ ಗೃಹ ಸಚಿವಾಲಯ, ಆಪಾದನೆಯನ್ನು ಪುಷ್ಟೀಕರಿಸುವ ಯಾವುದೇ ಸಾಕ್ಷಿಗಳಿಲ್ಲ ಎಂದು ಹೇಳಿದೆ. ನಾಗ್ಪುರದ ಕಾರ್ಯಕರ್ತ ಮೊಹ್ನೀಶ್ ಜಬಲ್‌ಪುರೆ ಅವರು ಕಳೆದ ಆಗಸ್ಟ್ 31 ರಂದು ಸಲ್ಲಿಸಿದ ಆರ್‌ಟಿಐ ಅರ್ಜಿಗೆ ಸಚಿವಾಲಯ ಉತ್ತರಿಸಿದೆ, ಗೃಹ ಸಚಿವಾಲಯ ದೇಶದಲ್ಲಿ ಹಿಂದೂ ಧರ್ಮಕ್ಕೆ ಬೆದರಿಕೆಯಿದೆಯೆಂಬುದಕ್ಕೆ ಪುರಾವೆಗಳನ್ನು ತೋರಿಸಿ ಎಂದು ಕೇಳಿದ್ದರು.

ಅದಕ್ಕೆ ಗೃಹ ಸಚಿವಾಲಯ ಆಂತರಿಕ ಭದ್ರತೆ ಅಧಿಕಾರಿ ರಾಣಾ, ಜಬಲ್ಪುರೆಯ “ಕಾಲ್ಪನಿಕ” ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಿಲ್ಲ, ಇದನ್ನು ಶೂನ್ಯ ಮತ್ತು ಅನೂರ್ಜಿತ ಎಂದು ಪರಿಗಣಿಸಲಾಗಿದೆ ಎಂದಿದ್ದಾರೆ.

ಗೃಹ ಸಚಿವಾಲಯದ ಪ್ರಮುಖ ಕಾರ್ಯದರ್ಶಿಯೊಬ್ಬರು ‘ಹಿಂದೂ ಧರ್ಮದ ಬೆದರಿಕೆಗಳಿಗೆ’ ಸಂಬಂಧಿಸಿದ ಯಾವುದೇ ಪ್ರಶ್ನೆಯು ಕಾಲ್ಪನಿಕ ಎಂದು ಹೇಳಿರುವುದು ಇದೇ ಮೊದಲು. ಅಂತಹ ಯಾವುದೇ ಊಹೆಯನ್ನು ಬೆಂಬಲಿಸಲು ಯಾವುದೇ ದಾಖಲೆಗಳಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ಜಬಲ್‌ಪುರೆ ಸರ್ಕಾರದ ಪ್ರತಿಕ್ರಿಯೆ ಪಡೆದ ಬಳಿಕ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು