Categories: ದೇಶ

ಹಿಮಾಚಲ: ಸಿಎಂ ನಿವಾಸದ ಸಮೀಪದಲ್ಲೇ ಕಾಣಿಸಿಕೊಂಡ ಚಿರತೆ

ಹಿಮಾಚಲಪ್ರದೇಶ: ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದ ಪ್ರತಿಷ್ಠಿತ ಪ್ರದೇಶವೊಂದರಲ್ಲಿರುವ ಮುಖ್ಯಮಂತ್ರಿಗಳ ನಿವಾಸದ ಬಳಿ ಚಿರತೆಯೊಂದು ಕಾಣಿಸಿಕೊಂಡಿದೆ. ಮುಖ್ಯಮಂತ್ರಿಗಳ ಗೃಹದ ಬಳಿ ಚಿರತೆಯನ್ನು ಕಂಡ ಮಹಿಳೆಯೊಬ್ಬರು ಅಲ್ಲಿಂದ ಓಡಿ ಹೋಗಿ ಜೀವ ಉಳಿಸಿಕೊಂಡಿದ್ದಾರೆ.ನಗರದ ಸಂಜೌಲಿ, ಕನ್ಲಾಂಗ್, ನವ್ಬಾಹರ್‌ ಮತ್ತು ಮಲ್ಯಾನಾ ಪ್ರದೇಶಗಳಲ್ಲಿ ಚಿರತೆ ಈ ಹಿಂದೆ ಕಾಣಿಸಿಕೊಂಡಿದೆ. ಇತ್ತೀಚೆಗೆ ಅರಣ್ಯ ಇಲಾಖೆ ಸಿಬ್ಬಂದಿ ಹೆಣ್ಣು ಚಿರತೆಯೊಂದನ್ನು ಸೆರೆ ಹಿಡಿಯಲು ಸಫಲರಾಗಿದ್ದರು.

ಘಟನೆ ಬಳಿಕ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಹಾಗೂ ನಗರಾಡಳಿತಗಳು ದೊಡ್ಡ ಬೆಕ್ಕನ್ನು ಹಿಡಿಯಲು ಜಾಲ ಹೆಣೆದಿವೆ.

ಮುಖ್ಯಮಂತ್ರಿಗಳ ನಿವಾಸವಿರುವ ಭಾರೀ ಭದ್ರತೆ ಇರುವ ಇಂಥ ಪ್ರದೇಶದಲ್ಲೇ ಚಿರತೆ ಕಂಡಿರುವುದು ಸ್ಥಳೀಯರಲ್ಲಿ ಗಾಬರಿ ಮೂಡಿಸಿದೆ.

ನಗರದಲ್ಲಿ ಸುಮಾರು 8 ಚಿರತೆಗಳು ಓಡಾಡುತ್ತಿರುವ ಕಾರಣ ನಗರವಾಸಿಗಳಲ್ಲಿ ಭಯ ಆವರಿಸಿದೆ. ಕೆಲವೊಂದು ಚಿರತೆಗಳು ಅರಣ್ಯ ಇಲಾಖೆಯ ಕ್ಯಾಮೆರಾಗಳ ಕಣ್ಣಿಗೆ ಬಿದ್ದಿವೆ.

ನಗರದಲ್ಲಿ ಇಬ್ಬರು ಮಕ್ಕಳನ್ನು ಚಿರತೆಗಳು ಕೊಂದಿವೆ. ದೀಪಾವಳಿಯ ರಾತ್ರಿಯೊಂದರ ವೇಳೆ, ನಗರದ ಡೌ‌ನ್‌ಡೇಲ್ ಪ್ರದೇಶದಲ್ಲಿ ಆರು ವರ್ಷದ ಮಗುವೊಂದನ್ನು ಚಿರತೆ ಕೊಂದಿತ್ತು.

Swathi MG

Recent Posts

100ರ ಮುಖ ಬೆಲೆಯ ಹಳೆ ಮಾದರಿ ನೋಟು ರದ್ದಾಗದಿದ್ದರೂ ಚಲಾವಣೆಗೆ ಹಿಂದೇಟು

ತಾಲ್ಲೂಕಿನಲ್ಲಿ ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಹಾಗೂ ₹10…

4 mins ago

ಇಂದಿನ ಆರ್​​​ಸಿಬಿ, ಪಂಜಾಬ್​​ ನಡುವಿನ ಐಪಿಎಲ್​​ ಪಂದ್ಯ ರದ್ದು?

ಕಳೆದ ಮೂರು ದಿನಗಳಿಂದ ಇಡೀ ದೇಶಾದ್ಯಂತ ಭಾರೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲೂ ಗುಡುಗು ಸಮೇತ ಮಳೆ ಸುರಿಯುತ್ತಿದೆ. ಇಷ್ಟೇ ಅಲ್ಲ…

4 mins ago

ಎಸ್​ಎಸ್​ಎಲ್​ಸಿ ಫಲಿತಾಂಶ: ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಮುಂದುವರೆದಿವೆ. 

17 mins ago

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

45 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

50 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

1 hour ago