ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳ ಅಂತರದಲ್ಲಿ 30,093 ಕೋವಿಡ್ ಹೊಸ ಪ್ರಕರಣಗಳು ದಾಖಲಾಗಿವೆ. ನಾಲ್ಕು ತಿಂಗಳಲ್ಲಿ ದಾಖಲಾಗಿರುವ ಅತಿ ಕಡಿಮೆ ಪ್ರಕರಣಗಳು ಇದಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯಿಂದ ತಿಳಿದು ಬಂದಿದೆ.
24 ಗಂಟೆಗಳಲ್ಲಿ ಕೋವಿಡ್ ಕಾರಣಗಳಿಂದಾಗಿ 374 ಮಂದಿ ಮೃತಪಟ್ಟಿದ್ದಾರೆ ಹಾಗೂ 45,254 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ ದೇಶದಲ್ಲಿ 4,06,130 ಪ್ರಕರಣಗಳು ಸಕ್ರಿಯವಾಗಿದೆ.
ಒಟ್ಟು ಪ್ರಕರಣಗಳ ಸಂಖ್ಯೆ 3,11,74,322 ತಲುಪಿದ್ದು, ಈ ಪೈಕಿ 4,14,482 ಮಂದಿ ಸಾವಿಗೀಡಾಗಿದ್ದಾರೆ ಹಾಗೂ 3,03,53,710 ಮಂದಿ ಗುಣಮುಖರಾಗಿದ್ದಾರೆ.