News Karnataka Kannada
Monday, April 29 2024
ದೇಶ

₹ 6 ಲಕ್ಷ ಕೋಟಿ ಮೌಲ್ಯದ ಎನ್‌ಎಂಪಿ ಘೋಷಿಸಿದ ನಿರ್ಮಲಾ ಸೀತಾರಾಮನ್

Nirmala Seetaraman Delhi 28 6 21
Photo Credit :

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ‘ರಾಷ್ಟ್ರೀಯ ನಗದೀಕರಣ ಯೋಜನೆ’(ಎನ್‌ಎಂಪಿ) ಘೋಷಿಸಿದ್ದಾರೆ.

₹ 6 ಲಕ್ಷ ಕೋಟಿ ಮೌಲ್ಯದ ಮೂಲಸೌಕರ್ಯಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಿದ್ದು. ಈ ಪಟ್ಟಿಯಲ್ಲಿ ಪ್ರಮುಖವಾಗಿ ರಸ್ತೆಗಳು, ರೈಲ್ವೆ ಹಾಗೂ ವಿದ್ಯುತ್ ಗ್ರಿಡ್‌ಗಳೂ ಸೇರಿವೆ. ಆದರೆ ಭೂಮಿ ಮಾರಾಟ ಈ ಪಟ್ಟಿಯಲ್ಲಿ ಸೇರಿಲ್ಲ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರವು ರಾಷ್ಟ್ರೀಯ ನಗದೀಕರಣ ಯೋಜನೆ ಅಡಿ 2022ರ ಹಣಕಾಸು ವರ್ಷದಿಂದ 2025 ರ ಹಣಕಾಸು ವರ್ಷದವರೆ ಮುಂದಿನ ನಾಲ್ಕು ವರ್ಷಗಳಲ್ಲಿ ಮೂಲಸೌಕರ್ಯ ಆಸ್ತಿಗಳನ್ನು ಮಾರಾಟ ಮಾಡಲಿದೆ ಎಂದು ನಿರ್ಮಲಾ ತಿಳಿಸಿದ್ದಾರೆ.

ರಾಷ್ಟ್ರೀಯ ನಗದೀಕರಣ ಪೈಪ್‌ಲೈನ್ ಅನ್ನು ಯಶಸ್ವಿಯಾಗಿಸಲು ನಾವು ಸಂಪೂರ್ಣವಾಗಿ ಬದ್ಧರಾಗಿದ್ದೇವೆ. ಉತ್ತಮ ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಖಾಸಗಿ ವಲಯಕ್ಕೆ ಪ್ರವೇಶಿಸುವುದು ಬಹಳ ಮುಖ್ಯ ಎಂದು ನಾವು ಭಾವಿಸುತ್ತೇವೆ. ಮತ್ತು ಅದಕ್ಕಾಗಿ ನಾವು ಕಷ್ಟಪಟ್ಟು ಕೆಲಸ ಮಾಡಲು ಬದ್ಧರಾಗಿದ್ದೇವೆ ಎಂದು ಇದೇ ಸಂದರ್ಭದಲ್ಲಿ ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು