ಠಾಣೆ: ಮಹಾರಾಷ್ಟ್ರದ ಉಲ್ಲಾಸ್ ನಗರದ ರೈಲ್ವೆ ನಿಲ್ದಾಣದಲ್ಲಿ 14 ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು, 35 ವರ್ಷದ ಆರೋಪಿಯನ್ನು ಭಾನುವಾರ ಬಂಧಿಸಲಾಗಿದೆ. ಬಾಲಕಿಯು ತನ್ನ ಸ್ನೇಹಿತರೊಂದಿಗೆ ಶಿರಡಿಯಿಂದ ಹಿಂತಿರುಗುತ್ತಿದ್ದಾಗ ಆರೋಪಿಯು ಅಪ್ರಾಪ್ತೆಯನ್ನು ಉಲ್ಲಾಸನಗರ ರೈಲ್ವೆ ನಿಲ್ದಾಣದ ಪ್ರತ್ಯೇಕ ಕೊಠಡಿಗೆ ಕರೆದೊಯ್ಯುದ್ದು, ಅಲ್ಲಿ ಅತ್ಯಾಚಾರವೆಸಗಿದ್ದಾನೆ.
ಈ ಸಂಬಂಧ ಬಾಲಕಿಯ ಕುಟುಂಬಸ್ಥರು ಕಲ್ಯಾಣ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆತನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತೆಯ ತಲೆಗೆ ಏಟು ಬಿದ್ದಿದ್ದು, ಆಕೆಗೆ ಉಲ್ಲಾಸನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.