ಗುಜರಾತ್

15,000 ಕೋಟಿ ರೂ. ಮೌಲ್ಯದ ಹೆರೈನ್ ವಶ : ದಂಪತಿ ಬಂಧನ

ಅಹಮದಾಬಾದ್‌ : ಅಫ್ಘಾನಿಸ್ತಾನ್‍ದಿಂದ ಅಕ್ರಮವಾಗಿ ಭಾರತಕ್ಕೆ ಆಮದು ಆಗಿದ್ದ ಸುಮಾರು 15,000 ಕೋಟಿ ರೂ. ಮೌಲ್ಯದ ಮಾದಕ ವಸ್ತು ಹೆರಾಯಿನ್‍ನನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ವಶಕ್ಕೆ ಪಡೆದಿದ್ದು, ಪ್ರಕರಣ ಸಂಬಂಧ ಆಂಧ್ರಪ್ರದೇಶದ ದಂಪತಿ ಹಾಗೂ ಇಬ್ಬರು ಅಫ್ಗನ್ನರನ್ನು ಬಂಧನ ಮಾಡಿದೆ. ಗುಜರಾತ್‌ನ ಕಛ್‌ ಜಿಲ್ಲೆಯ ಮುಂದ್ರಾ ಬಂದರಿನಲ್ಲಿದ್ದ ಹೆರಾಯಿನ್‍ನ್ನು ವಶಕ್ಕೆ ಪಡೆಯಲಾಗಿದೆ.
ವಿಜಯವಾಡದ ಮೆ. ಆಶಿ ಟ್ರೇಡಿಂಗ್ ಕಂಪನಿಯು ಅರೆ ಸಂಸ್ಕರಿತ ಟಾಲ್ಕ್‌ ಕಲ್ಲುಗಳೆಂದು ಘೋಷಿಸಿದ್ದ ವಸ್ತುಗಳನ್ನು ಅಫ್ಗಾನಿಸ್ತಾನದಿಂದ ಆಮದು ಮಾಡಿಕೊಂಡಿತ್ತು. ಅದು ಇರಾನ್‌ ಬಂಡಾರ್‌ ಅಬ್ಬಾಸ್ ಬಂದರ್ ಮೂಲಕ ಗುಜರಾತ್‌ನ ಮುಂದ್ರಾ ಬಂದರಿಗೆ ತಲುಪಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಡಿಆರ್‌ಐ ಅಧಿಕಾರಿಗಳು, ಬಂದರಿಗೆ ಬಂದಿದ್ದ 40 ಟನ್‌ಗಳ ಎರಡು ಕಂಟೇನರ್‌ಗಳನ್ನು ಪರೀಕ್ಷಿಸಿದರು. ಗಾಂಧಿನಗರದ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರ ನೇತೃತ್ವದಲ್ಲಿ ಕಂಟೇನರ್‌ಗಳ ಒಳಗಿದ್ದ ವಸ್ತುಗಳ ಪರೀಕ್ಷೆ ನಡೆಸಲಾಯಿತು. ನಂತರ ತಜ್ಞರು, ಇದರಲ್ಲಿರುವುದು ಹೆರಾಯಿನ್ ಎಂದು ದೃಢಪಡಿಸಿದರು.

ಇದೇ ರೀತಿ ಅಹಮದಾಬಾದ್‌, ದೆಹಲಿ, ಚೆನ್ನೈ ಮತ್ತು ಗುಜರಾತ್‌ನ ಗಾಂಧಿಧಾಮ ಮತ್ತು ಮಾಂಡವಿಯಲ್ಲೂ ತಪಾಸಣೆ ಕೈಗೊಳ್ಳಲಾಗಿದೆ ಎಂದು ಡಿಆರ್‌ಐ ಪ್ರಕಟಣೆಯಲ್ಲಿ ತಿಳಿಸಿದೆ. ವಿಜಯವಾಡ ಮೂಲದ ಆಶಿ ಟ್ರೇಡಿಂಗ್ ಕಂಪನಿ ಗೋವಿಂದರಾಜು ಮತ್ತು ಪತ್ನಿ ವೈಶಾಲಿ ಅವರಿಗೆ ಸೇರಿದ್ದು ಎಂದು ಗುರುತಿಸಲಾಗಿದೆ. ಪತಿ–ಪತ್ನಿ ಇಬ್ಬರೂ ಚೆನ್ನೈ ಮೂಲದವರು. ಅವರು ವಿಜಯವಾಡದಲ್ಲಿ ‘ರಫ್ತು – ಆಮದು ಕಂಪನಿಯನ್ನು ನೋಂದಣಿ ಮಾಡಿಸಿದ್ದಾರೆ ಎಂದು ಡಿಆರ್‌ಐ ಅಧಿಕಾರಿಗಳು ತಿಳಿಸಿದ್ದಾರೆ. ಈ ಇಬ್ಬರನ್ನು ಡಿಆರ್‌ಐ ಬಂಧಿಸಿದ್ದು, ಅವರನ್ನು ಭುಜ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ ಇಬ್ಬರನ್ನು ವಿಚಾರಣೆಗಾಗಿ ಹತ್ತು ದಿನಗಳ ಕಾಲ ಡಿಆರ್‌ಐ ವಶಕ್ಕೆ ನೀಡಿದೆ.

Raksha Deshpande

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

10 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago