ದೇಶ

2013ರ ಪ್ರಧಾನಿ ಮೋದಿ ಪಾಟ್ನಾ ರ್ಯಾಲಿ ವೇಳೆ ಸರಣಿ ಸ್ಫೋಟ ಪ್ರಕರಣ : ನಾಲ್ವರಿಗೆ ಗಲ್ಲು, ಇಬ್ಬರಿಗೆ ಜೀವಾವಧಿ ಶಿಕ್ಷೆ

ಪಾಟ್ನಾ: 2013ರಲ್ಲಿ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಸರಣಿ ಬಾಂಬ್​​​ ಸ್ಫೋಟ ಪ್ರಕರಣದ ಒಂಬತ್ತು ಅಪರಾಧಿಗಳ ಪೈಕಿ ನಾಲ್ವರಿಗೆ ರಾಷ್ಟ್ರೀಯ ತನಿಖಾ ದಳ(ಎನ್​ಐಎ)ದ ವಿಶೇಷ ನ್ಯಾಯಾಲಯ ಸೋಮವಾರ ಗಲ್ಲು ಶಿಕ್ಷೆ ವಿಧಿಸಿದೆ.

ಕಳೆದ ವಾರ ನ್ಯಾಯಾಲಯವು 10 ಆರೋಪಿಗಳ ಪೈಕಿ ಒಂಬತ್ತು ಆರೋಪಿಗಳಾದ ಹೈದರ್ ಅಲಿ ಅಲಿಯಾಸ್ ‘ಬ್ಲ್ಯಾಕ್ ಬ್ಯೂಟಿ’, ನಮನ್ ಅನ್ಸಾರಿ, ಮುಜಿಬುಲ್ಲಾ ಅನ್ಸಾರಿ, ಇಮ್ತಿಯಾಜ್ ಆಲಂ, ಅಹ್ಮದ್ ಹುಸೇನ್, ಫಿರೋಜ್ ಅಸ್ಲಾಂ, ಇಮ್ತಿಯಾಜ್ ಅನ್ಸಾರಿ, ಇಫ್ತಿಕರ್ ಆಲಂ ಮತ್ತು ಅಜರುದ್ದೀನ್ ಖುರೇಷಿ ದೋಷಿಗಳೆಂದು ತೀರ್ಪು ನೀಡಿತ್ತು. ಆದರೆ ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿತ್ತು.

ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದ ನ್ಯಾಯಮೂರ್ತಿ ಗುರ್ವಿಂದರ್ ಸಿಂಗ್ ಅವರು, ನಾಲ್ವರು ಅಪರಾಧಿಗಳಿಗೆ ಮರಣದಂಡನೆ, ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, ಇಬ್ಬರು ಅಪರಾಧಿಗಳಿಗೆ 10 ವರ್ಷ ಜೈಲು ಮತ್ತು ಒಬ್ಬ ಅಪರಾಧಿಗೆ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ್ದಾರೆ.

2013ರ ಅಕ್ಟೋಬರ್ 7ರಂದು ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ರ್ಯಾಲಿ ವೇಳೆ ಪಾಟ್ನಾ ರೈಲು ನಿಲ್ದಾಣದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 6 ಜನ ಸಾವನ್ನಪ್ಪಿ, 90ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದರು. ಆದರೂ ನರೇಂದ್ರ ಮೋದಿ ತಮ್ಮ ಚುನಾವಣಾ ಪ್ರಚಾರದ ರ್ಯಾಲಿಯನ್ನು ಮುಂದುವರೆಸಿದ್ದರು.

Sneha Gowda

Recent Posts

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

6 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

23 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

44 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

1 hour ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

1 hour ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

2 hours ago