News Karnataka Kannada
Monday, April 15 2024
Cricket
ದೇಶ

ಬಿಜಾಪುರದಲ್ಲಿ ಎನ್ ಕೌಂಟರ್: ನಾಲ್ವರು ನಕ್ಸಲೀಯರನ್ನು ಹೊಡೆದುರುಳಿಸಿದ ಸೇನೆ

Encounter
Photo Credit : NewsKarnataka

ರಾಯಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರಇಂದು ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಲೆಂಡ್ರಾ ಗ್ರಾಮದ ಬಳಿಯ ಕಾಡಿನಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಕಾಳಗ ನಡೆದಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಬಸ್ತರ್ ರೇಂಜ್) ಸುಂದರರಾಜ್ ಪಿ ತಿಳಿಸಿದರು.

ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯಪಡೆ, ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ಕೋಬ್ರಾಗೆ ಸೇರಿದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಗುಂಡಿನ ಚಕಮಕಿ ನಿಲ್ಲಿಸಿದ ನಂತರ, ನಾಲ್ವರು ನಕ್ಸಲೀಯರ ಮೃತದೇಹಗಳು ಮತ್ತು ಲಘು ಮೆಷಿನ್ ಗನ್ ಮತ್ತಿತರ ಶಸ್ತ್ರಾಸ್ತ್ರಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ, ಆ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು