Categories: ದೇಶ

15 ವರ್ಷದಲ್ಲಿ 41.5 ಕೋಟಿ ಭಾರತೀಯರು ಬಡತನದಿಂದ ಹೊರಗೆ: ವಿಶ್ವಸಂಸ್ಥೆ ವರದಿ

ಕೇವಲ ಹದಿನೈದು ವರ್ಷದಲ್ಲಿ ಸುಮಾರು 41.5 ಕೋಟಿ ಭಾರತೀಯರು ಕಡು ಬಡತನದಿಂದ  ಹೊರಬಂದಿದ್ದಾರೆ ಎಂದು ವಿಶ್ವಸಂಸ್ಥೆ ವರದಿ ಮಾಡಿದೆ. ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರದ ಅತಿ ದೊಡ್ಡ ಸಾಧನೆ ಇದು ಬಣ್ಣಿಸಿದೆ.

2005-2006 ರಿಂದ ಹಿಡಿದು 2019-2021ರ ನಡುವೆ ಬಹು ಆಯಾಮಗಳ ಬಡತನದಿಂದ (ಮನೆ, ವಿದ್ಯುತ್‌, ಶಿಕ್ಷಣ, ನೈರ್ಮಲ್ಯ, ಪೌಷ್ಠಿಕ ಆಹಾರ ಇತ್ಯಾದಿಗಳಿಂದ ವಂಚಿತರಾದವರು) ಹೊರಬಂದವರ ಸಂಖ್ಯೆಯನ್ನು ವರದಿ ಮಾಡಿದೆ. ಭಾರತ ಸೇರಿದಂತೆ 25 ದೇಶಗಳು 15 ವರ್ಷಗಳಲ್ಲಿ ಕಡು ಬಡತನದ ಪ್ರಮಾಣವನ್ನು ಅರ್ಧಕ್ಕೆ ಇಳಿಸಿವೆ ಎಂದು ವರದಿ ಹೇಳಿದೆ.

ಯುನಿಟೈಡೆಡ್‌ ನೇಷನ್‌ ಡೆವಲಪ್‌ಮೆಂಟ್‌ ಪ್ರೋಗ್ರಾಮ್‌ , ಆಕ್ಸ್‌ಫರ್ಡ್ ಪಾವರ್ಟಿ ಆಯಂಡ್‌ ಹ್ಯೂಮನ್ ಡೆವಲಪ್‌ಮೆಂಟ್‌ ಇನಿಷೇಟಿವ್‌ ಸಂಸ್ಥೆಗಳು ಬಿಡುಗಡೆ ಮಾಡಿರುವ ‘ಗ್ಲೋಬಲ್‌ ಮಲ್ಟಿಡೈಮೆನ್ಷನಲ್‌ ಪಾವರ್ಟಿ’ ಸೂಚ್ಯಂಕದಲ್ಲಿ ಈ ಮಾಹಿತಿ ಬಹಿರಂಗವಾಗಿದೆ. ‘ಭಾರತದಲ್ಲಿ ಕಡು ಬಡತನ ಪ್ರಮಾಣ ಕಡಿಮೆಯಾಗಿದೆ. ಕೇವಲ15 ವರ್ಷದಲ್ಲಿ ಸುಮಾರು 41.5 ಕೋಟಿ ಜನರು ಕಡು ಬಡತನದಿಂದ ಹೊರಬಂದಿದ್ದಾರೆ. 2005-2006ರಲ್ಲಿ ಶೇಕಡ 55.1ರಷ್ಟು,  2015-2016ರಲ್ಲಿ ಸರಿ ಸುಮಾರು 37 ಕೋಟಿ ಜನರು ಮತ್ತು 2019-2021ರಲ್ಲಿ ಶೇ. 16ರಷ್ಟು ಜನರು ಕಡು ಬಡತನದ ಸುಳಿಯಿಂದ ಹೊರಬಂದಿದ್ದಾರೆ’ ಎಂದು ವರದಿ ಹೇಳಿದೆ.

Ashitha S

Recent Posts

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

11 mins ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

36 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

49 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

1 hour ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

2 hours ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

2 hours ago