ಕೊರೋನಾ ಮತ್ತೆ ದೇಶದಲ್ಲಿ ಹೆಚ್ಚುತ್ತಿದ್ದು, ಇದರ ನಡುವೆಭಾರತ್ ಬಯೋಟೆಕ್ನ ಕೊವ್ಯಾಕ್ಸಿನ್ ಲಸಿಕೆಯನ್ನು ಮಕ್ಕಳಿಗೆ ನೀಡಲು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ) ಒಪ್ಪಿಗೆ ನೀಡಿದೆ.
ಈ ಮೂಲಕ ಇನ್ನು 6ರಿಂದ 12 ವರ್ಷದೊಳಗಿನ ಮಕ್ಕಳಿಗೆ ಕೊವ್ಯಾಕ್ಸಿನ್ ಹಾಗೂ 5ರಿಂದ 12 ವರ್ಷದೊಳಗಿನ ಮಕ್ಕಳಿಗೆ ಕಾರ್ಬೆವಾಕ್ಸ್ ಲಸಿಕೆ ನೀಡಬಹುದಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಮಾಹಿತಿ ನೀಡಿದ್ದಾರೆ.
ಕಳೆದ ಡಿಸೆಂಬರ್ ತಿಂಗಳಲ್ಲಿ 12ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ತುರ್ತು ಅನುಮತಿಸಿದ್ದ ಡಿಸಿಜಿಐ, 5 ರಿಂದ 12 ವರ್ಷದೊಳಗಿನ ಮಕ್ಕಳಿಗೆ ಕಾರ್ಬೆವಾಕ್ಸ್ ಲಸಿಕೆ ನೀಡಲು ಅವಕಾಶ ನೀಡಿತ್ತು.
ಇನ್ನು ವ್ಯಾಕ್ಸಿನ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಸಚಿವ ಕೆ.ಸುಧಾಕರ್ ಸಹ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಭಾರತ್ ಬಯೋಟೆಕ್ನ ಕೊವ್ಯಾಕ್ಸಿನ್ ಲಸಿಕೆಯನ್ನು ಮಕ್ಕಳಿಗೆ ನೀಡಲು ಡಿಸಿಜಿಐ ಅನುಮತಿ ನೀಡಿದೆ ಎಂದು ಅವರು ಹೇಳಿದ್ದಾರೆ.
भारत की कोविड से लड़ाई अब और अधिक मज़बूत @CDSCO_INDIA_INF ने
>6 से <12 आयुवर्ग के लिए 'Covaxin'
>5 से <12 आयुवर्ग के लिए 'Corbevax'
12 से ऊपर के आयुवर्ग के लिए 'ZyCoV-D' की 2 डोज को
'Restricted Use in Emergency Situations' की मंज़ूरी दी है।
— Dr Mansukh Mandaviya (मोदी का परिवार) (@mansukhmandviya) April 26, 2022