News Karnataka Kannada
Wednesday, May 01 2024
ದೇಶ

ಚಂಡಮಾರುತಕ್ಕೆ 5 ಜನರು ಸಾವು: ಪ್ರಧಾನಿ ಮೋದಿ ಸಂತಾಪ

New Project (1)
Photo Credit : NewsKarnataka

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉತ್ತರ ಭಾಗದಲ್ಲಿರುವ ಜಲ್ಪೈಗುರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ‘ಹಠಾತ್’ ಚಂಡಮಾರುತ ಅಪ್ಪಳಿಸಿದ ನಂತರ ಐವರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಜಿಲ್ಲಾ ಕೇಂದ್ರ ಪಟ್ಟಣದ ಬಹುತೇಕ ಭಾಗಗಳಲ್ಲಿ ಮತ್ತು ನೆರೆಯ ಮೈನಾಗೂರಿನ ಹಲವು ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯೊಂದಿಗೆ ಬೀಸಿದ ಬಲವಾದ ಗಾಳಿಯಿಂದ ಅನೇಕ ಗುಡಿಸಲುಗಳು ಮತ್ತು ಮನೆಗಳು ಹಾನಿಗೊಳಗಾಗಿವೆ, ಮರಗಳು ನೆಲಸಮವಾಗಿವೆ ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಂಡಮಾರುತದಿಂದಾಗಿ ರಾಜರಹತ್, ಬರ್ನೀಷ್, ಬಾಕಲಿ, ಜೋರ್ಪಕ್ಡಿ, ಮಧಬ್ದಂಗ, ಸಪ್ತಿಬರಿ ಹೆಚ್ಚು ಹಾನಿಯಾಗಿದ್ದು, ಹಲವಾರು ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆ ಹಾನಿಯಾಗಿದೆ ಎಂದರು.

ಇನ್ನು . ಪಶ್ಚಿಮ ಬಂಗಾಳದ ಜಲಪೈಗುರಿ-ಮೈನಾಗುರಿ ಪ್ರದೇಶಗಳಲ್ಲಿ ಚಂಡಮಾರುತದಿಂದ ಹಾನಿಗೊಳಗಾದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಧಿಕಾರಿಗಳೊಂದಿಗೆ ಮಾತನಾಡಿ, ಅತಿವೃಷ್ಟಿಯಿಂದ ಹಾನಿಗೊಳಗಾದವರಿಗೆ ಸೂಕ್ತ ನೆರವು ನೀಡುವುದಾಗಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು